ಬೆಂಗಳೂರು: ಗಾಯಕಿ ವಸುಂದರಾ ದಾಸ್ ಗೆ ಕಿರುಕುಳ; ಕ್ಯಾಬ್ ಚಾಲಕನ ವಿರುದ್ಧ ದೂರು ದಾಖಲು
ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್ 29 ರ ಸಂಜೆ 4.30 ರ ಸುಮಾರಿಗೆ ...

ಬೆಂಗಳೂರು: ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್ 29 ರ ಸಂಜೆ 4.30 ರ ಸುಮಾರಿಗೆ ಘಟನೆ ನಡೆದಿದೆ.
ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ವಸುಂಧರಾ ದಾಸ್ ಹೋಗುತ್ತಿದ್ದಾಗ, ಕ್ಯಾಬ್ ಚಾಲಕ ಭಾಷ್ಯಂ ಸರ್ಕಲ್ ಸಿಗ್ನಲ್‌ನಿಂದ ಹಿಂಬಾಲಿಸಿಕೊಂಡು ಬಂದಿದ್ದಾನೆ. ಇಟಿಯೋಸ್ ಕಾರಿನಲ್ಲಿ ಬಂದ ಆತ ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಕಾರು ಅಡ್ಡಗಟ್ಟಿದ್ದಾನೆ. ಬಳಿಕ ಆತ ಕಾರಿನಿಂದ ಇಳಿದು ವಸುಂಧರಾ ದಾಸ್ ಕಾರಿನ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಇದೇ ವೇಳೆ ವಸುಂಧರಾ ದಾಸ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ವಸುಂಧರಾ ದಾಸ್ ಅವರೊಡನೆ ತೀವ್ರ ವಾಗ್ವಾದ ನಡೆಸಿದ್ದು, ಈ ವೇಳಗೆ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ. ಅಷ್ಟರಲ್ಲಾಗಲೇ ಕ್ಯಾಬ್ ಚಾಲಕ ಸ್ಥಳದಿಂದ ತೆರಳಿದ್ದಾನೆ.
ಈ ಬಗ್ಗೆ ವಸುಂಧರಾ ದಾಸ್ ಅವರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. ಸೆಕ್ಷನ್ 509 341, 364 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ಯಾಬ್ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


