'ಯುವರತ್ನ'ದಲ್ಲಿ ಪುನೀತ್ ರಾಜ್ ಕುಮಾರ್ ಕಾಲೇಜ್ ವಿದ್ಯಾರ್ಥಿ ಪಾತ್ರ!
ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಪುನೀತ್ ರಾಜ್ ಕುಮಾರ ನಟನೆಯ ಚಿತ್ರಕ್ಕೆ ಯುವರತ್ನ ಎಂದು ಟೈಟಲ್ ಫೈನಲ್ ಆಗಿದೆ....

Published On :
ಬೆಂಗಳೂರು: ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಪುನೀತ್ ರಾಜ್ ಕುಮಾರ ನಟನೆಯ ಚಿತ್ರಕ್ಕೆ ಯುವರತ್ನ ಎಂದು ಟೈಟಲ್ ಫೈನಲ್ ಆಗಿದೆ.
ಪವರ್ ಆಫ್ ಯೂತ್ ಎಂಬ ಟ್ಯಾಗ್ ಲೈನ್ ಹೊಂದಿರುವ ಯುವರತ್ನ ಟೈಟಲ್ ಅನ್ನು ಅಭಿಮಾನಿಯೊಬ್ಬರಿಂದ ಸಂತೋಷ್ ಬಹಿರಂಗ ಪಡಿಸಿದ್ದಾರೆ. ಈಗ ಸಂತೋಷ್ ಪ್ರೇಕ್ಷಕರಿಗೆ ಮತ್ತೊಂದು ಕುತೂಹಲ ಮೂಡಿಸಿದ್ದಾರೆ.
ಸಿನಿಮಾದಲ್ಲಿ ಪುನೀತ್ ಕಾಲೇಜ್ ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದಾರೆ, ಈಗಾಗಲೇ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ಜೋಡಿಯಲ್ಲಿ ರಾಜಕುಮಾರ ಸಿನಿಮಾ ಸಖತ್ ಹಿಟ್ ಕಂಡಿತ್ತು, ಈಗ ಮತ್ತದೆ ಜೋಡಿ ಹೊಸ ಹಿಟ್ ನೀಡಲು ಸಿದ್ದತೆ ನಡೆಸಿದೆ, ಡಿಸೆಂಬರ್ ನಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ, ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


