ಸಿನಿಮಾ ಸುದ್ದಿ

ರಾಧಿಕಾ ಕುಮಾರಸ್ವಾಮಿ ರೌದ್ರಾವತಾರ 'ದಮಯಂತಿ' ಚಿತ್ರದ ಫಸ್ಟ್ ಲುಕ್

ಸ್ಯಾಂಡಲ್ವುಡ್ ನ ಮೋಸ್ಟ್ ಬ್ಯೂಟಿಫುಲ್ ನಟಿ ರಾಧಿಕಾ ಕುಮಾರಸ್ವಾಮಿ ಅವರು ರೌದ್ರಾವತಾರ ತಾಳಿರುವ ದಮಯಂತಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ...

ರಾಧಿಕಾ ಕುಮಾರಸ್ವಾಮಿ ರೌದ್ರಾವತಾರ 'ದಮಯಂತಿ' ಚಿತ್ರದ ಫಸ್ಟ್ ಲುಕ್
ರಾಧಿಕಾ ಕುಮಾರಸ್ವಾಮಿ
Published On :
ಸ್ಯಾಂಡಲ್ವುಡ್ ನ ಮೋಸ್ಟ್ ಬ್ಯೂಟಿಫುಲ್ ನಟಿ ರಾಧಿಕಾ ಕುಮಾರಸ್ವಾಮಿ ಅವರು ರೌದ್ರಾವತಾರ ತಾಳಿರುವ ದಮಯಂತಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. 
ಇತ್ತೀಚೆಗಷ್ಟೇ ಭೈರಾದೇವಿ ಚಿತ್ರಕ್ಕಾಗಿ ಕಾಳಿ ಅವತಾರದಲ್ಲಿ ಕಾಣಿಸಿಕೊಂಡಿದ್ದ ರಾಧಿಕಾ ಕುಮಾರಸ್ವಾಮಿ ಅವರು ಇದೀಗ ದಮಯಂತಿ ಚಿತ್ರದಲ್ಲಿ ನಟಿಸುತ್ತಿದ್ದು ಈ ಚಿತ್ರದ ಫಸ್ಟ್ ಲುಕ್ ಸಹ ಭಯ ಹುಟ್ಟಿಸುವಂತಿದೆ.
Story image
ದಮಯಂತಿ ಚಿತ್ರವನ್ನು ನವರಸನ್ ನಿರ್ದೇಶನ ಮಾಡುತ್ತಿದ್ದಾರೆ. ನವರಸನ್ ಇದಕ್ಕೂ ಮುಂದೆ ರಾಕ್ಷಿಸಿ ಹಾಗೂ ವೈರಾ ಚಿತ್ರಗಳಲ್ಲಿ ನಟಿಸಿ, ನಿರ್ದೇಶನ ಮಾಡಿದ್ದರು. 
ಇದೊಂದು ಐತಿಹಾಸಿಕ ಹಿನ್ನೆಲೆಯ ಥ್ರಿಲ್ಲರ್ ಕಥೆಯನ್ನೊಳಗೊಂಡ ಚಿತ್ರವಾಗಿದ್ದು ಹೆಸರೇ ಹೇಳುವಂತೆ ಇದು ಮಹಿಳಾ ಪ್ರಧಾನ ಸಿನಿಮಾವಾಗಿದೆ. ಸದ್ಯ ರಿಲೀಸ್ ಆಗಿರುವ ಈ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಲುಕ್ ಮೈ ಜುಮ್ ಅನ್ನಿಸೋ ಹಾಗಿದೆ. 
ಮುಂದಿನ ವಾರದಿಂದ ಚಿತ್ರದ ಶೂಟಿಂಗ್ ಪ್ರಾರಂಭವಾಗಿದೆ. ಚಿತ್ರಕ್ಕೆ ಪಿಕೆಹೆಚ್ ದಾಸ್ ಛಾಯಾಗ್ರಹಣ ಹಾಗೂ ಗಣೇಶ್ ನಾರಾಯಣ್ ಚಿತ್ರಕ್ಕೆ ಸಂಗೀತ ಸಂಯೋಜಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.