ಸಿನಿಮಾ ಸುದ್ದಿ

ಕನ್ನಡ ಬಾವುಟಕ್ಕೆ ಅವಮಾನ: ಕಿಚ್ಚ ಸುದೀಪ್, ನಿರ್ದೇಶಕ ಪ್ರೇಮ್ ವಿರುದ್ಧ ದೂರು ದಾಖಲು

ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಆರೋಪದಡಿಯಲ್ಲಿ ನಟ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಪ್ರೇಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ.

ಕನ್ನಡ ಬಾವುಟಕ್ಕೆ ಅವಮಾನ: ಕಿಚ್ಚ ಸುದೀಪ್, ನಿರ್ದೇಶಕ ಪ್ರೇಮ್ ವಿರುದ್ಧ ದೂರು ದಾಖಲು
ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಪ್ರೇಮ್
Published On :
ಬೆಂಗಳೂರು: ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಆರೋಪದಡಿಯಲ್ಲಿ ನಟ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಪ್ರೇಮ್ ವಿರುದ್ಧ ಕರ್ನಾಟಕ  ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ.
ಪ್ರೇಮ್ ನಿರ್ದೇಶನದ ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿನಯದ "ದಿ ವಿಲನ್" ಚಿತ್ರದ ಹಾಡೊಂದರಲ್ಲಿ ಸುದೀಪ್ ಕನ್ನಡ ಬಾವುಟವನ್ನು ಸೊಂಟಕ್ಕೆ ಸುತ್ತಿಕೊಳ್ಳುವ ಮೂಲಕ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ನಿರ್ದೇಶಕ ಪ್ರೇಮ್ ಹಾಗೂ ಸುದೀಪ್ ಇಬ್ಬರೂ ಕ್ಷಮೆ ಕೇಳಬೇಕು ಎಂದುಕನ್ನಡ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.
ಕನ್ನಡ ಚಳವಳಿ ನಾಗೇಶ್ ಎನ್ನುವವರು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದು ಹಾಗೇನಾದರೂ ಕ್ಷಮೆ ಕೇಳದೆ ಹೋದರೆ "ದಿ ವಿಲನ್" ಪ್ರದರ್ಶಿಸಲಾಗುವ ಚಿತ್ರಮಂದಿರಗಳ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
Story image
"ದಿ ವಿಲನ್ ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅಪಮಾನ ಮಾಡಲಾಗಿದೆ ಎನ್ನುವ ದೂರು ಬಂದಿರುವುದು ನಿಜ. ಆದರೆ ಚಿತ್ರ ಬಿಡುಗಡೆಯಾಗಿ ಹಲವು ದಿನಗಳಾಗಿದ್ದು ಸೆನ್ಸಾರ್ ಮಂಡಳಿ ಸಹ ಈ ದೃಶ್ಯಗಕ್ಕೆ ಅನುಮತಿ ನೀಡಿದೆ. ಹೀಗಾಗಿ ದೂರುದಾರರು ನೇರವಾಗಿ ನಿರ್ದೇಶಕ ಪ್ರೇಮ್ ಅವರ ಬಳಿ ತೆರಳಬೇಕೆಂದು ಸೂಚಿಸಿದ್ದೇವೆ" ಮಾಧ್ಯಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ. ಚೆನ್ನೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.