ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಕ್ಯೂಟ್ ಜೋಡಿ: ಆರತಕ್ಷತೆಗಾಗಿ ಬೆಂಗಳೂರಿನತ್ತ ದೀಪಿಕಾ-ರಣವೀರ್
ಇಟಲಿಯಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಕ್ಯೂಟ್ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು ಇದೀಗ ಆರತಕ್ಷತೆಗಾಗಿ ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದಾರೆ...

Published On :
ಮುಂಬೈ: ಇಟಲಿಯಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಕ್ಯೂಟ್ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು ಇದೀಗ ಆರತಕ್ಷತೆಗಾಗಿ ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದಾರೆ.
ಇಂದು ಬೆಳಿಗ್ಗೆ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜೋಡಿಗಳು ಮಾಧ್ಯಮಗಳಿಗೆ ಪೋಸ್ ಕೊಟ್ಟರು.
ಹಣೆ ಮೇಲೆ ಸಿಂಧೂರು ಇಟ್ಟುಕೊಂಡಿದ್ದ ದೀಪಿಕಾ ಅವರು, ಅನಾರ್ಕಲಿ ಚೂಡಿದಾರ್ ಹಾಗೂ ರಣವೀರ್ ಸಿಂಗ್ ಅವರು ಕುರ್ತಾ ಪೈಜಾಮಾ ಹಾಕಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖುಷಿಯಲ್ಲಿ ಕಾಣಿಸುತ್ತಿದ್ದರು.
ಇಟಲಿಯಲ್ಲಿ ಅದ್ದೂರಿಯಾಗಿ ವಿವಾಹ ಸಮಾರಂಭ ನೆರವೇರಿಸಿಕೊಕಂಡ ಜೋಡಿಗಳು, ಬುಧವಾರ ಬೆಂಗಳೂರಿನಲ್ಲಿ ನಡೆಯಲಿರುವ ಆರತಕ್ಷತೆಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುMumbaiಮುಂಬೈBengaluruವಿವಾಹDeepika Padukoneದೀಪಿಕಾ ಪಡುಕೋಣೆweddingRanveer Singhರಣವೀರ್ ಸಿಂಗ್Receptionಆರತಕ್ಷತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


