ಮಿಮಿಕ್ರಿ ಮಾಡಿ, ಅಭಿಮಾನಿಗಳಿಗೆ ಅಪ್ಪು ಜೊತೆ ವೇದಿಕೆ ಹಂಚಿಕೊಳ್ಳುವ ಅವಕಾಶ!
ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ನಟಸಾರ್ವಭೌಮ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅದೃಷ್ಟವಂತ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಬಹುದಾಗಿದೆ.

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ನಟಸಾರ್ವಭೌಮ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅದೃಷ್ಟವಂತ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಬಹುದಾಗಿದೆ.
ಪುನೀತ್ ರಾಜ್ ಕುಮಾರ್ ಅವರೇ ಮಾಡಿರುವ ವಿಡಿಯೋದಲ್ಲಿ ಈ ಆಶ್ಚರ್ಯಕರ ಸುದ್ದಿಯೊಂದನ್ನು ಪ್ರಕಟಿಸಿದ್ದಾರೆ. ಅಪ್ಪು ರೀತಿಯಲ್ಲಿ ಮಿಮಿಕ್ರಿ ಮಾಡುವ ಅಭಿಮಾನಿಗಳು ನಟ ಸಾರ್ವಭೌಮ ಚಿತ್ರದ ಆಡಿಯೋ ಬಿಡುಗಡೆ ವೇದಿಕೆ ಹಂಚಿಕೊಳ್ಳಬಹುದೆಂದು ಅವರು ತಿಳಿಸಿದ್ದಾರೆ.
ಈ ವರ್ಷ ಬಿಡುಗಡೆಯಾಗಿರುವ ಟೀಸರ್ ನಲ್ಲಿ ಕ್ಯಾಮರಾ ಕೈಯಲ್ಲಿಟ್ಟುಕೊಂಡು ವಿಶಿಷ್ಠ ರೀತಿಯಲ್ಲಿ ಪೋಸ್ ನೀಡಿದ್ದು, ಪೋಟೋ ಜನರ್ಲಿಸ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರಂತೆಯೇ ಅಭಿನಯ ಮಾಡುವ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಬಹುದು ಅಭಿನಂದನೆ ಸ್ವೀಕರಿಸಬಹುದು ಎಂದು ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


