ಸಿನಿಮಾ ಸುದ್ದಿ

ಬೆಂಗಳೂರಿನ ಫ್ಲ್ಯಾಟ್'ನಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದ ಅಂಬಿ: ತೀವ್ರ ಎದೆನೋವಿನಿಂದ ನಿಧನ

ಕನ್ನಡ ಚಿತ್ರರಂಗದ ರೆಬೆಲ್'ಸ್ಟಾರ್ ಹಾಗೂ ವರ್ಚಸ್ವಿ ರಾಜಕಾರಣಿ ಅಂಬರೀಷ್ ಅವರಿಗೆ ಏಕಾಏಕಿ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ...

ಬೆಂಗಳೂರಿನ ಫ್ಲ್ಯಾಟ್'ನಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದ ಅಂಬಿ: ತೀವ್ರ ಎದೆನೋವಿನಿಂದ ನಿಧನ
ನಟ ಅಂಬರೀಷ್
Published On :
ಬೆಂಗಳೂರು: ಕನ್ನಡ ಚಿತ್ರರಂಗದ ರೆಬೆಲ್'ಸ್ಟಾರ್ ಹಾಗೂ ವರ್ಚಸ್ವಿ ರಾಜಕಾರಣಿ ಅಂಬರೀಷ್ ಅವರಿಗೆ ಏಕಾಏಕಿ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. 
ಶನಿವಾರ ಸಂಜೆ ಅಂಬರೀಷ್ ಅವರಿಗೆ ಏಕಾಏಕಿ ಎದೆನೋವು ಹಾಗೂ ಉಸಿರಾಟದ ತೀವ್ರ ಸಮಸ್ಯೆ ಕಾಣಿಸಿಕೊಂಡಿದೆ. ಈ ವೇಳೆ ವಿಂಡ್ಸರ್ ಮ್ಯಾನರ್ ಬಳಿಯ ಫ್ಲ್ಯಾಟ್ ನಲ್ಲಿ ನಿಂತಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ವಸಂತನಗರದ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 
ತೀವ್ರ ಎದೆನೋವು ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತೀವ್ರ ಹೃದಯಾಗಾತದಿಂದ ಸುಮಾರು 10.15ರ ವೇಳೆ ಮೃತಪಟ್ಟಿದ್ದಾರೆದು ತಿಳಿದುಬಂದಿದೆ. 
ಕಳೆದ 15 ವರ್ಷಗಳಿಂದ ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು 2014ರಲ್ಲಿ ತೀವ್ರ ಅನಾರೋಗ್ಯ ಸಮಸ್ಯೆ ಎದುರಿಸಿದ್ದರು. ಈ ವೇಳೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ವಿಕ್ರಂ ಆಸ್ಪತ್ರೆ ಹಾಗೂ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮೂಲಕ ಮೃತ್ಯವನ್ನು ಜಯಿಸಿ ಮರುಹುಟ್ಟು ಪಡೆದಿದ್ದರು. 
ಇದಾದ ಬಳಿಕವೂ ಕಾಲಕಾಲಕ್ಕೆ ವೈದ್ಯಕೀಯ ಪರೀಕ್ಷೆ ಹಾಗೂ ಫಾಲೋಅಪ್ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಶನಿವಾರ ಸಂಜೆ ಏಕಾಏಕಿ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಡಾ.ಸತೀಶ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 
ಕಳೆದ 15 ವರ್ಷಗಳಿಂದಲೂ ಸಣ್ಣ ಪ್ರಮಾಣದ ಶ್ವಾಸಕೋಶದ ಸೋಂಕಿನಿಂದ ಅಂಬರೀಷ್ ಅವರು ಬಳಲುತ್ತಿದ್ದರು. 4 ವರ್ಷಗಳ ಹಿಂದೆ ದೊಡ್ಡ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿತ್ತು. ಈ ವೇಳೆ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂಬರೀಷ್ ಅವರನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕಳುಹಿಸಲಾಗಿತ್ತು. 
ಬಳಿಕ ಅವರ ಆರೋಗ್ಯ ಸುಧಾರಿಸಿತ್ತು. ವಯೋ ಸಹಜವಾಗಿ ಜೀವ ನಿರೋಧಕ ಶಕ್ತಿ ಕುಂದಿರುವುದರಿಂದ ಮತ್ತೆ ತೀವ್ರ ಸಮಸ್ಯೆ ಕಾಣಿಸಿಕೊಂಡಿದೆ. ಜೊತೆಗೆ ಹೃದಯದಲ್ಲೂ ಸಮಸ್ಯೆ ಉಂಟಾಗಿದ್ದು, ಏಕಾಏಕಿ ಆರೋಗ್ಯದಲ್ಲಿ ಉಂಟಾದ ಏರುಪೇರಿನಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.