ಸಿನಿಮಾ ಸುದ್ದಿ

ಆತ್ಮೀಯ ಗೆಳೆಯನ ಪಾರ್ಥಿವ ಶರೀರದ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅತ್ತ ತೆಲುಗು ನಟ ಚಿರಂಜೀವಿ, ಮೋಹನ್ ಬಾಬು!

ಸ್ಯಾಂಡಲ್ವುಡ್ ನ ರೆಬೆಲ್ ಸ್ಟಾರ್ ಅಂಬರೀಶ್ ಅವರು ವಿಧಿವಶರಾಗಿದ್ದು ಅವರ ಅಂತಿಮ ದರ್ಶನ ಪಡೆದ ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಮತ್ತು ಮೋಹನ್ ಬಾಬು ಅವರು ಕಣ್ಣೀರಿಟ್ಟಿದ್ದಾರೆ...

ಆತ್ಮೀಯ ಗೆಳೆಯನ ಪಾರ್ಥಿವ ಶರೀರದ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅತ್ತ ತೆಲುಗು ನಟ ಚಿರಂಜೀವಿ, ಮೋಹನ್ ಬಾಬು!
ಅಂಬರೀಶ್-ಚಿರಂಜೀವಿ-ಮೋಹನ್ ಬಾಬು
Published On :
ಬೆಂಗಳೂರು: ಸ್ಯಾಂಡಲ್ವುಡ್ ನ ರೆಬೆಲ್ ಸ್ಟಾರ್ ಅಂಬರೀಶ್ ಅವರು ವಿಧಿವಶರಾಗಿದ್ದು ಅವರ ಅಂತಿಮ ದರ್ಶನ ಪಡೆದ ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಮತ್ತು ಮೋಹನ್ ಬಾಬು ಅವರು ಕಣ್ಣೀರಿಟ್ಟಿದ್ದಾರೆ. 
ಕಂಠೀರವ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಗೆಳೆಯನ ಅಂತಿಮ ದರ್ಶನ ಪಡೆಯಲು ಬಂದ ನಟ ಮೋಹನ್ ಬಾಬು ಅವರು ಗೆಳೆಯನ ಪಾರ್ಥಿವ ಶರೀರ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅತ್ತರು. ನಂತರ ಬಂದ ಚಿರಂಜೀವಿ ಅವರು ಸಹ ಗೆಳೆಯನ ಮುಂದೆ ನಿಂತು ಕಣ್ಣೀರಿಟ್ಟರು. ಬಳಿಕ ಅಂಬಿ ಪತಿ ಸುಮಲತ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳಿದರು. 
ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಅಂಬರೀಶ್ ಅವರ ಅಂತಿಮ ದರ್ಶನ ಪಡೆದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.