ಬೆಂಗಳೂರು: 2.0 ಚಿತ್ರ ಪ್ರದರ್ಶನಕ್ಕೆ ವಿರೋಧ: ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ
ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ 2.0 ಚಿತ್ರ ವಿಶ್ವದಾದ್ಯಂತ ಇಂದು ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ 2.0 ಚಿತ್ರ ವಿಶ್ವದಾದ್ಯಂತ ಇಂದು ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಈ ನಡುವೆ ರಾಜ್ಯದಲ್ಲಿ ಈ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಊರ್ವಶಿ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಲಾಯಿತು.
ಈಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಕನ್ನಡ ದ್ರೋಹಿಯಾಗಿರುವ ರಜನಿಕಾಂತ್ ಅಭಿಯನದ 2.0 ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ನೀಡಬಾರದು. ಚಿತ್ರ ಬಿಡುಗಡೆಗೆ ಅವಕಾಶ ನೀಡಿದರೆ ಕನ್ನಡ ಚಿತ್ರಗಳಿಗೆ ತೊಂದರೆ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಚಿತ್ರ ಬಿಡುಗಡೆಯಾದರೆ ಡಿಸೆಂಬರ್ 1 ರಂದು ವಾಣಿಜ್ಯ ಮಂಡಳಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಪ್ರತಿಭಟನಾ ನಿರತ ವಾಟಾಳ್ ನಾಗರಾಜ್ ಸೇರಿದಂತೆ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


