ರಜನಿ' ಅಭಿಯನದ 2.0 ಚಿತ್ರಕ್ಕೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ
ಸೂಪರ್ ಸ್ಟಾರ್ ರಜನಿಕಾಂತ್ ಅಭಿಯನದ ಬಹುನಿರೀಕ್ಷಿತ 2.0 ಚಿತ್ರ ನಿನ್ನೆ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿಯನದ ಬಹುನಿರೀಕ್ಷಿತ 2.0 ಚಿತ್ರ ನಿನ್ನೆ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆದರೆ, ಇತ್ತೀಚಿಗೆ ರೆಬೆಲ್ ಸ್ಟಾರ್ ಅಂಬರೀಷ್ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ರಜನಿ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯ ಕಂಡುಬರುತ್ತಿದೆ.
ಅಂಬರೀಷ್ ಹಾಗೂ ರಜನಿಕಾಂತ್ ಉತ್ತಮ ಗೆಳೆಯರಾಗಿದ್ದರು. ಅಂಬಿ ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಬಂದಿದ್ದ ರಜನಿಕಾಂತ್, ತಮ್ಮ ಚಿತ್ರ ಬಿಡುಗಡೆ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆ ಮಾಡದಂತೆ ಅಭಿಮಾನಿಗಳ ಬಳಿ ಕೇಳಿಕೊಂಡಿದ್ದರು. ಈ ಕರೆಗೆ ಹೂಗಟ್ಟ ಅಭಿಮಾನಿಗಳು ಕೂಡಾ ಯಾವುದೇ ಆಚರಣೆ ಮಾಡುತ್ತಿಲ್ಲ.
ಬಾಲಿವುಡ್ ನಟ ಅಕ್ಷಯ್ ಕುಮಾರ್, ಜೊತೆಗೆ ರಜನಿಕಾಂತ್ ನಟಿಸಿರುವ ಈ ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದು, ತಮಿಳು, ತೆಲುಗು, ಹಿಂದಿಯಲ್ಲಿ 2ಡಿ, 3ಡಿ ಆವೃತ್ತಿ ಸೇರಿದಂತೆ ಬೆಂಗಳೂರು ಒಂದರಲ್ಲಿ 950ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿದೆ. ಬೆಂಗಳೂರು ಹೊರತುಪಡಿಸಿದಂತೆ ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


