ಡಾ. ರಾಜ್ ಕುಟುಂಬದ ಮತ್ತೊಂದು ಕುಡಿ ಚಿತ್ರರಂಗಕ್ಕೆ ಎಂಟ್ರಿ!
ಡಾ. ರಾಜಕುಮಾರ್ ಕುಟುಂಬದ ಒಂದೊಂದೆ ಮುತ್ತುಗಳು ಇದೀಗ ಚಿತ್ರರಂಗದಲ್ಲಿ ಪ್ರಜ್ವಲಿಸಲು ಅಣಿಯಾಗುತ್ತಿವೆ. ಇತ್ತೀಚೆಗಷ್ಟೇ ರಾಘವೇಂದ್ರ ರಾಜಕುಮಾರ್ ಪುತ್ರ ಗುರು...

Published On :
ಡಾ. ರಾಜಕುಮಾರ್ ಕುಟುಂಬದ ಒಂದೊಂದೆ ಮುತ್ತುಗಳು ಇದೀಗ ಚಿತ್ರರಂಗದಲ್ಲಿ ಪ್ರಜ್ವಲಿಸಲು ಅಣಿಯಾಗುತ್ತಿವೆ. ಇತ್ತೀಚೆಗಷ್ಟೇ ರಾಘವೇಂದ್ರ ರಾಜಕುಮಾರ್ ಪುತ್ರ ಯುವರಾಜಕುಮಾರ್ ಅಲಿಯಾಸ್ ಗುರು ರಾಘವೇಂದ್ರ ರಾಜಕುಮಾರ್ ಸಿನಿಮಾ ರಂಗಕ್ಕೆ ಕಾಲಿಡುವುದಾಗಿ ಹೇಳಿದ್ದು ಇದೀಗ ರಾಜ್ ಕುಟುಂಬಂದ ಮತ್ತೊಂದು ಕುಡಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದೆ.
ಡಾ. ರಾಜಕುಮಾರ್ ಸಹೋದರ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಸ್ಪಿ ವರದಪ್ಪನವರ ಮೊಮ್ಮಗ ಪೃಥ್ವಿ ವಿಜಯ್ ಕುಮಾರ್ ಇದೀಗ ಮಿಂಚುಹುಳ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಮಿಂಚುಹುಳು ಚಿತ್ರ ಮಕ್ಕಳ ಚಿತ್ರವಾಗಿದ್ದು ಈ ಚಿತ್ರವನ್ನು ಕುಮಾರ್ ಮಹೇಶ್ ಎಂಬುವರು ನಿರ್ದೇಶಿಸುತ್ತಿದ್ದಾರೆ. ಇನ್ನು ಪೃಥ್ವಿ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ಕುಮಾರ್ ಮಹೇಶ್ ಹೇಳಿದ್ದಾರೆ.
ಈ ಚಿತ್ರದಲ್ಲಿ ಬಾಲ ಪ್ರತಿಭೆ ಪ್ರೀತಂ ಅಭಿನಯಿಸುತ್ತಿದ್ದಾರೆ. ಪ್ರೀತಂ ಇತ್ತೀಚೆಗಷ್ಟೇ ಡ್ಯಾನ್ಸ್ ರಿಯಾಲಿಟಿ ಶೋವೊಂದರಲ್ಲಿ ಭಾಗವಹಿಸಿ ವಿಜೇತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SandalwoodDr. Rajkumarಸ್ಯಾಂಡಲ್ವುಡ್ಡಾ. ರಾಜಕುಮಾರ್Prithvi VijaykumarMinchuhuluKumar Maheshಪೃಥ್ವಿ ವಿಜಯ್ ಕುಮಾರ್ಮಿಂಚುಹುಳುಕುಮಾರ್ ಮಹೇಶ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


