ಅನಧಿಕೃತ ಫ್ಲೆಕ್ಸ್ ಬೋರ್ಡ್: ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು
ಭರ್ಜರಿ ಹುಡುಗ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಾಗಿದೆ. ಇತ್ತೀಚಿಗೆ ತನ್ನ 30ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನ ಭರವಸೆಯ ನಾಯಕ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಬೆಂಗಳೂರು: ಭರ್ಜರಿ ಹುಡುಗ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಾಗಿದೆ. ಇತ್ತೀಚಿಗೆ ತನ್ನ 30ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನ ಭರವಸೆಯ ನಾಯಕ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಅಕ್ಟೋಬರ್ 6 ರಂದು ತನ್ನ ಹುಟ್ಟಹಬ್ಬ ಸಂದರ್ಭದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ , ಬೋರ್ಡ್ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಸಹಾಯಕ ಅಧಿಕಾರಿಗಳು ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಹುಭಾಷಾ ನಟ ಅರ್ಜನ್ ಸರ್ಜಾ ಅವರ ಸಂಬಂಧಿ ಹಾಗೂ ನಟ ಚಿರಂಜೀವಿ ಸರ್ಜಾ ಅವರ ಸಹೋದರರಾಗಿರುವ ಧ್ರುವ ಸರ್ಜಾ, ತನ್ನ ವಿಭಿನ್ನ ಅಭಿನಯ, ಮ್ಯಾನರಿಸಂ, ಡೈಲಾಗ್ ಡೆಲಿವರಿಯಿಂದ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು, ಹುಟ್ಟಹಬ್ಬದ ವೇಳೆಯಲ್ಲಿ ಬನಶಂಕರಿಯಲ್ಲಿ ಬೃಹತ್ ಆಕಾರದ ಹೂಗಳಿಂದ ಅಲಂಕರಿಸಿದ ಫ್ಲೆಕ್ಸ್ ಬೋರ್ಡ್ ನ್ನು ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ.
2012ರಲ್ಲಿ ಅದ್ದೂರಿ ಚಿತ್ರದ ಮೂಲಕ ಕನ್ನಡ ಚಿತ್ರೋಧ್ಯಮ ಪ್ರವೇಶಿಸಿದ ಧ್ರುವ ಸರ್ಜಾ, ನಂತರ ಬಹದ್ದೂರ್, ಭರ್ಜರಿ ಸಿನಿಮಾ ಯಶಸ್ಸಿನಿಂದ ಬಹು ಬೇಡಿಕೆಯ ನಟನಾಗಿದ್ದಾರೆ. ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ಅಕ್ಟೋಬರ್ 18 ರಂದು ತೆರೆ ಮೇಲೆ ಬರಲು ಸಿದ್ಧವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


