ಶೀಘ್ರವೇ ಕವಲು ದಾರಿ ರಿಲೀಸ್ ಡೇಟ್ ಫೈನಲ್: ಹೇಮಂತ್ ಎಂ ರಾವ್
ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ನಿರ್ಮಾಣದ ಕವಲುದಾರಿ ಸಿನಿಮಾ ಶೂಟಿಂಗ್ ಫೈನಲ್ ಹಂತದಲ್ಲಿದೆ, ಕವಲುದಾರಿ ನವೆಂಬರ್ ಅಂತ್ಯ ಅಥವಾ ...

Published On :
ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ನಿರ್ಮಾಣದ ಕವಲುದಾರಿ ಸಿನಿಮಾ ಶೂಟಿಂಗ್ ಫೈನಲ್ ಹಂತದಲ್ಲಿದೆ, ಕವಲುದಾರಿ ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆಯಿದೆ.
ಹೇಮಂತ ಎಂ ರಾವ್ ನಿರ್ದೇಶನದ ಈ ಸಿನಿಮಾದಲ್ಲಿ ರಿಷಿ ನಟಿಸಿದ್ದಾರೆ. ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ, ಸಂಗೀತ ಸಂಬಂಧಿತ ಕೆಲವು ಕೆಲಸಗಳು ಮಾತ್ರ ಬಾಕಿ ಉಳಿದಿವೆ. ಹೇಮಂತ್ ಮತ್ತು ಚರಣ್ ರಾಜ್ ಕೆಲಸ ಮಾಡುತ್ತಿದ್ದಾರೆ.
ಮುಂದಿನ ಕೆಲ ದಿನಗಳಲ್ಲೇ ಚಿತ್ರತಂಡ ಸೆನ್ಸಾರ್ ಬೋರ್ಡ್ ಗೆ ಕಳುಹಿಸಲಿದೆ, ಸಿನಿಮಾಗೆ ಅದ್ವೈತ್ ಗುರುಮೂರ್ತಿ ಕ್ಯಾಮೆರಾಮನ್, ನಟ ರಿಷಿ ಸಬ್ ಇನ್ಸ್ ಪೆಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ರೋಷಿನಿ ಪ್ರಕಾಶ್ , ಅಚ್ಯುತ್ ಕುಮಾರ್, ಸುಮನ್ ರಂಗನಾಥ್, ಸಮನ್ವಿತಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಿಡುಗಡೆReleseHemanth M RaoಕವಲುದಾರಿAshwini Puneeth RajkumarKavalu dhariಅಶ್ವಿನಿ ಪುನೀತ್ ರಾಜ್ ಕುಮಾರ್ಹೇಮಂತ್ ಎಂರಾವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


