ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ವಿರುದ್ಧ ಮತ್ತೆ ಸಿಡಿದೆದ್ದ ಶ್ರುತಿ ಹರಿಹರನ್, ಸುದ್ದಿಗೋಷ್ಠಿಯಲ್ಲಿ ಶ್ರುತಿ ಹೇಳಿದ್ದೇನು!

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಇಂದು ಸುದ್ದಿಗೋಷ್ಠಿ ನಡೆಸಿ...

ಅರ್ಜುನ್ ಸರ್ಜಾ ವಿರುದ್ಧ ಮತ್ತೆ ಸಿಡಿದೆದ್ದ ಶ್ರುತಿ ಹರಿಹರನ್, ಸುದ್ದಿಗೋಷ್ಠಿಯಲ್ಲಿ ಶ್ರುತಿ ಹೇಳಿದ್ದೇನು!
ಶ್ರುತಿ ಹರಿಹರನ್
Published On :
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಇಂದು ಸುದ್ದಿಗೋಷ್ಠಿ ನಡೆಸಿ ಮತ್ತೆ ಅರ್ಜುನ್ ಸರ್ಜಾ ವಿರುದ್ಧ ಕಿಡಿಕಾರಿದ್ದಾರೆ. 
ಮಲ್ಲೇಶ್ವರಂ ರೇಣುಕಾಂಬ ಥಿಯೇಟರ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರುತಿ ಹರಿಹರನ್ ಅವರು, ನಾನು ಅರ್ಜುನ್ ಸರ್ಜಾ ವಿರುದ್ಧ ಮಾಡಿರುವ ಆರೋಪಕ್ಕೆ ಬದ್ಧವಾಗಿದ್ದೇನೆ ಎಂದರು. ಇನ್ನು ಘಟನೆ ನಡೆದಾಗ ನನಗೆ ಹೇಳಿಕೊಳ್ಳುವಷ್ಟು ಧೈರ್ಯ ಇರಲಿಲ್ಲ. ಈಗ ಧೈರ್ಯ ಬಂದಿದೆ. ಹೀಗಾಗಿ ನಾನು ಮಾಧ್ಯಮದ ಮುಂದೆ ಬಂದಿದ್ದೇನೆ. ಇದೇ ವೇಳೆ ನಾನು ಪಬ್ಲಿಸಿಟಿಗೋಸ್ಕರ ಸರ್ಜಾ ವಿರುದ್ಧ ಆರೋಪ ಮಾಡುತ್ತಿಲ್ಲ ಎಂದರು. 
ಚಿತ್ರರಂಗದಲ್ಲಿ ನಾನು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ. ಇನ್ನು ಸಾಕಷ್ಟು ಜನರ ಜೊತೆ ನಾನು ಕೆಲಸ ಮಾಡಿದ್ದೇನೆ. ಆದರೆ ಈ ರೀತಿ ಯಾರು ನನ್ನ ಜೊತೆ ನಡೆದುಕೊಂಡಿರಲಿಲ್ಲ ಎಂದು ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ವಾಗ್ದಾಳಿ ನಡೆಸಿದ್ದಾರೆ. 
ಅರ್ಜುನ್ ಸರ್ಜಾ ಅವರು ನನ್ನನ್ನು ಡಿನ್ನರ್ ಗೆ ಬಾ. ರೆಸಾರ್ಟ್ ಗೆ ಬಾ ಎಂದು ಕರೆದಿದ್ದರು. ಅವರು ಕರೆದ ಶೈಲಿ ಅನೈತಿಕವಾಗಿತ್ತು. ಮನಸ್ಸಿನಲ್ಲಿ ಯಾವುದೇ ದುರುದೇಷವಿಟ್ಟುಕೊಂಡು ಕರೆಯುತ್ತಿದ್ದಾರೆ ಎಂದು ನನಗೆ ಅನಿಸಿತ್ತು ಎಂದು ಹೇಳಿದ್ದಾರೆ. 
ಎಲ್ಲರೂ ಒಂದೇ ವ್ಯಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ಅಲ್ಲಿ ಏನೋ ಇರಬೇಕಲ್ಲ ಎಂದರು. ಇದನ್ನು ಮಾಧ್ಯಮದವರು ಪ್ರಶ್ನಿಸಬೇಕಿದೆ ಎಂದರು. 
ನನಗೆ ಸರ್ಜಾ ಫ್ಯಾನ್ಸ್ ಕ್ಲಬ್ ನಿಂದ ಸಾಕಷ್ಟು ಬೆದರಿಕೆ ಕರೆಗಳು ಬರುತ್ತೀವೆ. ಆದರೆ ಅರ್ಜುನ್ ಸರ್ಜಾ ಅವರ ಕುಟುಂಬದವರಿಂದ ಯಾವು ಕರೆಗಳು ಬಂದಿಲ್ಲ ಎಂದು ಶ್ರುತಿ ಹರಿಹರನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.