ಹಚ್ಚ ಹಸಿರಿನ ಮಧ್ಯೆ ವಿನಯ್ ರಾಜಕುಮಾರ್ 'ಗ್ರಾಮಾಯಣ' ಭರ್ಜರಿ ಶೂಟಿಂಗ್
ನಟ ವಿನಯ್ ರಾಜಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದ ಶೂಟಿಂಗ್ ಚಿಕ್ಕಮಗಳೂರಿನ ದೇವನೂರು ಗ್ರಾಮದಲ್ಲಿ ಭರ್ಜರಿಯಾಗಿ ಆರಂಭಗೊಂಡಿದೆ...

Published On :
ನಟ ವಿನಯ್ ರಾಜಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದ ಶೂಟಿಂಗ್ ಚಿಕ್ಕಮಗಳೂರಿನ ದೇವನೂರು ಗ್ರಾಮದಲ್ಲಿ ಭರ್ಜರಿಯಾಗಿ ಆರಂಭಗೊಂಡಿದೆ.
ಗ್ರಾಮಾಯಣ ಚಿತ್ರದ ಮೊದಲ ಹಂತದ ಚಿತ್ರೀಕರಣ ದೇವನೂರಿನಲ್ಲಿ ನಡೆಯಲಿದ್ದು 25 ದಿನಗಳ ಕಾಲ ಚಿತ್ರತಂಡ ನಿರಂತರವಾಗಿ ಚಿತ್ರೀಕರಣ ನಡೆಸಲಿದೆ.
ವಿನಯ್ ಕುಮಾರ್ ಇದೇ ಮೊದಲ ಬಾರಿಗೆ ಹಳ್ಳಿ ಹುಡುಗನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿನಯ್ ಗೆ ಜೋಡಿಯಾಗಿ ಅಮ್ರಿತಾ ಐಯ್ಯರ್ ಅಭಿನಯಿಸುತ್ತಿದ್ದು ಈ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸುತ್ತಿದ್ದು ಅಭಿಶೇಕ್ ಕಾಸರಗೋಡು ಛಾಯಾಗ್ರಹಣವಿರಲಿದೆ. ಮಜಾ ಟಾಕೀಸ್ ಮೂಲಕ ಖ್ಯಾತಿ ಗಳಿಸಿರುವ ಅಪರ್ಣ ಈ ಚಿತ್ರದಲ್ಲಿ ನಟಿಸುತ್ತಿದ್ದು ವಿನಯ್ ತಾಯಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ.
ವಿನಯ್ ಕುಮಾರ್ ಅದಾಗಲೇ ಅನಂತು ವರ್ಸಸ್ ನುಸ್ರತ್ ಚಿತ್ರದಲ್ಲಿ ನಟಿಸಿದ್ದು ಸುದೀರ್ ಶಾನಬೋಗ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರ ನವೆಂಬರ್ ನಲ್ಲಿ ತೆರೆಕಾಣಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodವಿನಯ್ ಕುಮಾರ್Vinay Rajkumarಸ್ಯಾಂಡಲ್ವುಡ್Gramayanaಗ್ರಾಮಾಯಣAparnaAmritha Iyerಅಮ್ರಿತಾ ಐಯ್ಯರ್ಅಪರ್ಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


