#MeToo ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ, ಶಿವಣ್ಣ ಹೇಳಿದ್ದೇನು?
ಸ್ಯಾಂಡಲ್ ವುಡ್‌ನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿರುವ ಮೀಟೂ ಅಭಿಯಾನವು ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಇದೇ ಮೊದಲ ಬಾರಿಗೆ ನಟ ಶಿವರಾಜ್‌ಕುಮಾರ್ ಮೀಟೂ ಕುರಿತು ಮಾತನಾಡಿದ್ದಾರೆ.

Published On :
ಬೆಂಗಳೂರು: ಸ್ಯಾಂಡಲ್ ವುಡ್‌ನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿರುವ ಮೀಟೂ ಅಭಿಯಾನವು ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಇದೇ ಮೊದಲ ಬಾರಿಗೆ ನಟ ಶಿವರಾಜ್‌ಕುಮಾರ್ ಮೀಟೂ ಕುರಿತು ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ಮೀಟೂ ಬಗ್ಗೆ ಮಾತನಾಡಲು ಆಗಲ್ಲ. ಇಂಡಸ್ಟ್ರಿಗೆ ಸಂಬಂಧಿಸಿದ ವಿಚಾರಗಳೆಂದರೆ ನೋವಾಗುತ್ತದೆ. ವಾಣಿಜ್ಯ ಮಂಡಳಿಯಲ್ಲಿ ಆದಷ್ಟು ಬೇಗ ಸಮಸ್ಯೆ ಬಗೆಹರಿಯುತ್ತದೆ. ಯಾಕೆಂದರೆ ಮಂಡಳಿ ಮೇಲೆ ಒಂದು ಗೌರವವಿದ್ದು, ನಮ್ಮಲ್ಲೇ ಎಲ್ಲ ವಿಚಾರಗಳನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಅಂತೆಯೇ ಮೀಟೂ ಅವರವರ ಭಾವನೆಗಳ ಮೇಲೆ ನಿರ್ಧಾರವಾಗುತ್ತವೆ. ಅದು ತಪ್ಪಾ, ಸರಿನಾ ಎಂದು ಹೇಳಲಾಗುವುದಿಲ್ಲ. ನಾನು ಯಾರನ್ನು ನೋಯಿಸಲು ಇಷ್ಟಪಡುವುದಿಲ್ಲ. ಎಲ್ಲರೂ ಒಳ್ಳೆಯವರೇ. ದೇವರಲ್ಲಿ ಪ್ರಾರ್ಥಿಸೋಣ ಆದಷ್ಟು ಬೇಗ ಇದು ಬಗೆಹರಿಯಲಿ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruarjun sarjaSandalwoodಸ್ಯಾಂಡಲ್ ವುಡ್Shivaraj Kumarಶಿವರಾಜ್ ಕುಮಾರ್ಶೃತಿ ಹರಿಹರನ್Sruti HariharanMeTooಮೀಟೂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


