ಸಿನಿಮಾ ಸುದ್ದಿ

'1.5 ಕೋಟಿ ಕೊಡಿ, ಸಂಧಾನ ಮಾಡಿಸುತ್ತೇನೆ': ಅರ್ಜುನ್ ಸರ್ಜಾ ಮ್ಯಾನೇಜರ್ ಗೆ ಅಪರಿಚಿತನಿಂದ ಕರೆ?

ಸ್ಯಾಂಡಲ್ ವುಡ್ ಮೀಟೂ ಪ್ರಕರಣ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವಂತೆಯೇ ವಿವಾದದ ನಡುವೆಯೇ ಅಪರಿಚಿತ ವ್ಯಕ್ತಿಯೋರ್ವ ಇಬ್ಬರ ಜಗಳವನ್ನು ಲಾಭ ಮಾಡಿಕೊಳ್ಳಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.

'1.5 ಕೋಟಿ ಕೊಡಿ, ಸಂಧಾನ ಮಾಡಿಸುತ್ತೇನೆ': ಅರ್ಜುನ್ ಸರ್ಜಾ ಮ್ಯಾನೇಜರ್ ಗೆ ಅಪರಿಚಿತನಿಂದ ಕರೆ?
ಸಂಗ್ರಹ ಚಿತ್ರ
Published On :
ಬೆಂಗಳೂರು: ಸ್ಯಾಂಡಲ್ ವುಡ್ ಮೀಟೂ ಪ್ರಕರಣ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವಂತೆಯೇ ವಿವಾದದ ನಡುವೆಯೇ ಅಪರಿಚಿತ ವ್ಯಕ್ತಿಯೋರ್ವ ಇಬ್ಬರ ಜಗಳವನ್ನು ಲಾಭ ಮಾಡಿಕೊಳ್ಳಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೀಟೂ ಆರೋಪ ಎದುರಿಸುತ್ತಿರುವ ನಟ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿದ್ದು, ಶೃತಿ ಹರಿಹರನ್ ರೊಂದಿಗೆ ತಾನು ಸಂಧಾನ ಮಾಡಿಸುತ್ತೇನೆ. ತನಗೆ 1.5 ಕೋಟಿ ರೂ ನೀಡಿ ಎಂದು ಬೇಡಿಕೆ ಇಟ್ಟಿದ್ದನಂತೆ. ಈ ಬಗ್ಗೆ ಸ್ವತಃ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ, 'ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎಂದು ಹೇಳಿದ್ದಾರೆ.
ಕರೆ ಮಾಡಿದ ವ್ಯಕ್ತಿ ಯಾವುದೇ ಪರಿಚಯ ಹೇಳಿಕೊಳ್ಳದೆ, ತಮ್ಮ ಬೇಡಿಕೆ ತಿಳಿಸುತ್ತಿದ್ದಂತೆ ಫೋನ್ ಕಟ್ ಮಾಡಿದ್ದಾನೆ ಎಂದು ಶಿವಾರ್ಜುನ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.