ಸಿನಿಮಾ ಸುದ್ದಿ

#Metoo: ಅರ್ಜುನ್ ಸರ್ಜಾ ಸಾಮಾಜಿಕ ಮಾಧ್ಯಮ ಖಾತೆಗಳು ಹ್ಯಾಕ್, ದೂರು ದಾಖಲು

ಬಹು ಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ಈಗ ಅರ್ಜುನ್ ಸರ್ಜಾ ಅವರ ಸಾಮಾಜಿಕ ಮಾಧ್ಯಮಗಳ ಖಾತೆ ಹ್ಯಾಕ್ ಮಾಡಿರುವ ಆರೋಪ ಎದುರಿಸಬೇಕಾಗಿದೆ.

#Metoo: ಅರ್ಜುನ್ ಸರ್ಜಾ ಸಾಮಾಜಿಕ ಮಾಧ್ಯಮ ಖಾತೆಗಳು ಹ್ಯಾಕ್, ದೂರು ದಾಖಲು
ಅರ್ಜುನ್ ಸರ್ಜಾ
Published On :

ಬೆಂಗಳೂರು: ಬಹು ಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ಈಗ  ಅರ್ಜುನ್ ಸರ್ಜಾ ಅವರ ಸಾಮಾಜಿಕ ಮಾಧ್ಯಮಗಳ ಖಾತೆ ಹ್ಯಾಕ್ ಮಾಡಿರುವ ಆರೋಪ ಎದುರಿಸಬೇಕಾಗಿದೆ.

ಅರ್ಜುನ್ ಸರ್ಜಾ ಅವರ ಫೇಸ್ ಬುಕ್, ಟ್ವಿಟರ್, ಇನ್ಸಾಟಾಗ್ರಾಮ್, ಮತ್ತು ಇ- ಮೇಲ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಅವರ ಮ್ಯಾನೇಜರ್ ಶಿವಾರ್ಜುನ್  ಸೈಬರ್ ಕ್ರೈಮ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಅರ್ಜುನ್ ಸರ್ಜಾ ಅವರ ವರ್ಚಸ್ಸು ಕುಂದಿಸುವ ನಿಟ್ಟಿನಲ್ಲಿ ಅವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.  ಅರ್ಜನ್ ಸರ್ಜಾ ಅವರ ಖಾತೆಗಳು ಹ್ಯಾಕ್ ಆಗಿರುವ ಸಂಬಂಧಿತ ಎಲ್ಲಾ ದಾಖಲೆಗಳನ್ನು ಠಾಣೆಗೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಅರ್ಜುನ್ ಸರ್ಜಾ ಅವರಿಗೆ ಬೆದರಿಕೆವೊಡ್ಡುವ ನಿಟ್ಟಿನಲ್ಲಿ ಶ್ರುತಿ ಹರಿಹರನ್ ಹಾಗೂ ಅವರ ಕಡೆಯವರು  ಸಾಮಾಜಿಕ ಮಾಧ್ಯಮಗಳ ಖಾತೆಗಳ ಹ್ಯಾಕ್ ಮಾಡಲಾಗಿದ್ದು, ಈ ಸಂಬಂಧಿತ ಎಲ್ಲಾ ದಾಖಲೆಗಳು  ನಮ್ಮ ಬಳಿ ಇವೆ ಎಂದು ಅವರು ಹೇಳಿದರು.

ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಅವರ ಮಾಹಿತಿ ಮಾತ್ರ ಕದಿಲ್ಲ. ಅವರ ಇ ಮೇಲ್ ನಿಂದ ಅನೇಕ ಇ-ಮೇಲ್ ರವಾನಿಸಲಾಗಿದೆ ಎಂದು ಮ್ಯಾನೇಜರ್ ಶಿವಾರ್ಜುನ ಆರೋಪಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಈ ನಡುವೆ ಈ ಪ್ರಕರಣ ಇತ್ಯರ್ಥಗೊಳ್ಳುವವರೆಗೂ  ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂವಾದ ನಡೆಸದಂತೆ  ಅರ್ಜುನ್ ಸರ್ಜಾ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.