ನನ್ನ ದೇಹದ ಭಾಗಗಳನ್ನು ಮುಟ್ಟಿ ಅಸಭ್ಯ ವರ್ತನೆ; ಅರ್ಜುನ್ ಸರ್ಜಾ ವಿರುದ್ಧ ಶೃತಿ ದೂರು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಇದೀಗ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

Published On :
ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಇದೀಗ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿದ ಶೃತಿ ಹರಿಹರನ್ ಅವರು, ಅರ್ಜುನ್ ಸರ್ಜಾ ವಿರುದ್ದ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದಾರೆ.
ಶೃತಿ ಹರಿಹರನ್ ತಮ್ಮ ದೂರಿನಲ್ಲಿ, ಅರ್ಜುನ್ ಸರ್ಜಾ ಅವರು ನನ್ನನ್ನು ಯುಬಿ ಸಿಟಿಯ ಪಬ್ ವೊಂದಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ನಾವಿಬ್ಬರು ಊಟ ಮಾಡಿದ್ದೇವು. ನಂತರ ಅವರು ನನ್ನ ದೇಹದ ತೊಡೆ, ಹಿಪ್ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದರು. ನನಗೆ ಲೈಂಕಿಗ ಕಿರುಕುಳ ನೀಡಿದ್ದರು ಎಂದು ತಿಳಿಸಿದ್ದಾರೆ.
ಅರ್ಜುನ್ ಸರ್ಜಾ ಅವರು ಮೊನ್ನೆಯಷ್ಟೇ ಶೃತಿ ಹರಿಹರನ್ ವಿರುದ್ಧ 5 ಕೋಟಿ ರುಪಾಯಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಶೃತಿ ಹರಿಹರನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
arjun sarjaಅರ್ಜುನ್ ಸರ್ಜಾSandalwoodSruthi Hariharanಶೃತಿ ಹರಿಹರನ್ಸ್ಯಾಂಡಲ್ವುಡ್Police complaintಪೊಲೀಸ್ ದೂರುMeTooಮೀಟೂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


