ಶ್ರುತಿ ಹರಿಹರನ್ ದೂರು ಬಳಿಕ ಅರ್ಜುನ್ ಸರ್ಜಾ ವಿರುದ್ಧ ಎಫ್ಐಆರ್ ದಾಖಲು
ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿರುವ ಬಹುಭಾಷಆ ನಟ ಅರ್ಜುನ್ ಸರ್ಜಾ ಮತ್ತು ನಟಿ ಶ್ರುತಿ ಹರಿಹರನ್ ನಡುವಿನ ಮೀ ಟೂ ವಿವಾದ ಮಹತ್ವದ ತಿರುವು ಪಡೆದುಕೊಂಡಿದೆ...

Published On :
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಮತ್ತು ನಟಿ ಶ್ರುತಿ ಹರಿಹರನ್ ನಡುವಿನ ಮೀ ಟೂ ವಿವಾದ ಮಹತ್ವದ ತಿರುವು ಪಡೆದುಕೊಂಡಿದೆ.
ಶ್ರುತಿ ಹರಿಹರನ್ ಅವರು ದೂರು ದಾಖಲಿಸಿದ ಬಳಿಕ ನಟ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಸೆಕ್ಷನ್ 354 (ಮಹಿಳೆಯ ವಿರುದ್ಧ ಕ್ರಿಮಿನಲ್ ಗಳ ಬಳಕೆ) 354 (ಎ) (ಲೈಂಗಿಕ ಕಿರುಕುಳ, 506 (ಕ್ರಿಮಿನಲ್ ಉದ್ದೇಶ), 509 (ಮಹಿಳೆಗೆ ಅವಮಾನ) ಅಡಿಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ವಿವಾದ ಬಗೆಹರಿಸುವಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ವಿಫಲಗೊಂಡ ಬಳಿಕ ಅರ್ಜುನ್ ಸರ್ಜಾ ಅವರು ಶ್ರುತಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಾದ ಬಳಿಕ ಕಾನೂನು ಸಲಹೆ ಪಡೆದ ನಟಿ ಶ್ರುತಿ ಹರಿಹರನ್ ಅವರು ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು.
ಶನಿವಾರ ಬೆಳಿಗ್ಗೆ 11 ಗಂಟೆಗೆ ತಮ್ಮ ವಕೀಲರೊಂದಿಗೆ ಕಸ್ತೂರ್ ರಸ್ತೆಯ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿದ ಶ್ರುತಿಯವರು 2016ರಲ್ಲಿ ತೆರೆ ಕಂಡ ವಿಸ್ಮಯ ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ತಮಗೆ ಆ ಚಿತ್ರದ ನಾಯಕ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು 5 ಪುಟಗಳ ದೂರು ಸಲ್ಲಿಸಿದ್ದರು.
ಶ್ರುತಿ ಸಲ್ಲಿಸಿದ ದೂರಿನನ್ವಯ ಅರ್ಜುನ್ ಸರ್ಜಾ ವಿರುದ್ಧ ಎಫ್ಐಆರ್ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಬಹುಭಾಷಾ ನಟನಿಗೆ ಬಂಧನ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


