ಮರೆಯಾದ 'ಧ್ರುವತಾರೆ': ಹಿಟ್ ಚಿತ್ರಗಳ ನಿರ್ದೇಶಕ ಎಂ.ಎಸ್. ರಾಜಶೇಖರ್ ನಿಧನ
ಡಾ. ರಾಜ್ ಕುಮಾರ್ ಅಭಿನಯದ 'ಧ್ರುವತಾರೆ' ಸೇರಿದಂತೆ ಅನುರಾಗ ಅರಳಿತು, ರಥಸಪ್ತಮಿ, ನಂಜುಂಡಿ ಕಲ್ಯಾಣಿ,...

Published On :
ಬೆಂಗಳೂರು: ಡಾ. ರಾಜ್ ಕುಮಾರ್ ಅಭಿನಯದ 'ಧ್ರುವತಾರೆ' ಸೇರಿದಂತೆ ಅನುರಾಗ ಅರಳಿತು, ರಥಸಪ್ತಮಿ, ನಂಜುಂಡಿ ಕಲ್ಯಾಣಿ, ಮನ ಮೆಚ್ಚಿದ ಹುಡುಗಿಯಂತಹ ಹಲವು ಹಿಟ್ ಚಿತ್ರಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ಎಂ.ಎಸ್.ರಾಜಶೇಖರ್ ಅವರು ಸೋಮವಾರ ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 75 ವರ್ಷದ ರಾಜಶೇಖರ್ ಅವರನ್ನು ಇಂದು ಬೆಳಗ್ಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜಶೇಖರ್ ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕನ್ನಡ ಚಿತ್ರರಂಗಕ್ಕೆ ಹಲವು ಯಶಸ್ವಿ ಚಿತ್ರಗಳನ್ನು ನೀಡಿದ್ದ ರಾಜಶೇಖರ್ ಅವರು, ಹಿಟ್ ಡೈರೆಕ್ಟರ್ ಎಂದೇ ಖ್ಯಾತಿ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


