ಸಿನಿಮಾ ಸುದ್ದಿ

ಶ್ರುತಿ ಹರಿಹರನ್ ದಾಖಲಿಸಿರುವ ಎಫ್ ಐ ಆರ್ ರದ್ದತಿ ಕೋರಿ ಹೈಕೋರ್ಟ್ ಗೆ ಅರ್ಜುನ್ ಸರ್ಜಾ ಅರ್ಜಿ !

ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ನಟಿ ಶ್ರುತಿ ಹರಿಹರನ್ ದಾಖಲಿಸಿರುವ ಎಫ್ ಐಆರ್ ರದ್ದತಿ ಕೋರಿ ನಟ ಅರ್ಜುನ್ ಸರ್ಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಶ್ರುತಿ ಹರಿಹರನ್ ದಾಖಲಿಸಿರುವ ಎಫ್ ಐ ಆರ್ ರದ್ದತಿ ಕೋರಿ ಹೈಕೋರ್ಟ್ ಗೆ ಅರ್ಜುನ್ ಸರ್ಜಾ ಅರ್ಜಿ !
ಅರ್ಜುನ್ ಸರ್ಜಾ, ಶ್ರುತಿ ಹರಿಹರನ್
Published On :

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ  ನಟಿ ಶ್ರುತಿ ಹರಿಹರನ್  ದಾಖಲಿಸಿರುವ  ಎಫ್ ಐಆರ್ ರದ್ದತಿ ಕೋರಿ ನಟ ಅರ್ಜುನ್ ಸರ್ಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

#ಮೀ ಟೂ ಅಭಿಯಾನ ತನ್ನ ಉದ್ದೇಶವನ್ನು ಕಳೆದುಕೊಳ್ಳುತ್ತಿದ್ದು, ಶ್ರುತಿ ಹರಿಹರನ್  ಪ್ರಚಾರಕೊಸ್ಕರ  ದುರುದ್ದೇಶದಿಂದ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.

ಶ್ರುತಿ ಹರಿಹರನ್ ಅವರ ಫೇಸ್ ಬುಕ್ ನಲ್ಲಿ ಅಮೆರಿಕಾದಿಂದ ಪೋಸ್ಟ್ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿರಬೇಕಾದ್ದರೆ ಅಮೆರಿಕಾದಿಂದ ಪೋಸ್ಟ್ ಮಾಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದು, ತಮ್ಮ ಇ-ಮೇಲ್ , ಸಾಮಾಜಿಕ  ಮಾಧ್ಯಮಗಳ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಈ ಸಂಬಂಧಿತ ಎಲ್ಲಾ ದಾಖಲೆಗಳನ್ನು ತಮ್ಮ ವಕೀಲರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ  ಎಂದು ತಿಳಿಸಿದ್ದಾರೆ.

ಶ್ರುತಿ ಹರಿಹರನ್ ವಿರುದ್ಧ ಮಾನನಷ್ಟ  ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಶ್ರುತಿ ಹರಿಹರನ್ ಸೇಡು ತೀರಿಸಿಕೊಳ್ಳಲು ತಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ತಮ್ಮ ವ್ಯಕ್ತಿತ್ವಕ್ಕೆ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ಈ ರೀತಿಯ ಪ್ರಯತ್ನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಾನೂನಿನ ಬಗ್ಗೆ ತಿಳಿದ ನಂತರ ಸರ್ಜಾ  ಅವರನ್ನು ಶಿಕ್ಷೆಗೆ ಗುರಿಪಡಿಸುವ ನಿಟ್ಟಿನಲ್ಲಿ ಶ್ರುತಿ ಹರಿಹರನ್ ಮತ್ತಷ್ಟು ಕಥೆ ಕಟ್ಟಿ ದೂರು ಸಲ್ಲಿಸಿದ್ದಾರೆ ಎಂದು ಅರ್ಜುನ್ ಸರ್ಜಾ ಪರ ವಕೀಲರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.