ಹುಟ್ಟುಹಬ್ಬದ ಖುಷಿಯ ನಡುವೆ ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದೇಕೆ?
ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮದ ಸಂದರ್ಭದಲ್ಲಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘುಲಾಠಿ...

Published On :
ಬೆಂಗಳೂರು: ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮದ ಸಂದರ್ಭದಲ್ಲಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘುಲಾಠಿ ಚಾರ್ಚ್ ಮಾಡಿದ್ದು ಇದರಿಂದ ಯಾರಿಗಾದರೂ ಬೇಸರವಾಗಿದ್ದಲ್ಲಿ ಕ್ಷಮೆ ಇರಲಿ ಎಂದು ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.
ಕಿಚ್ಚ ಸುದೀಪ್ 45ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ. ಇನ್ನು ಶನಿವಾರ ತಡರಾತ್ರಿ ಜೆಪಿ ನಗರದ ನಿವಾಸದ ಬಳಿ ಸಾವಿರಾರು ಅಭಿಮಾನಿಗಲು ಸುದೀಪ್ ರನ್ನು ಕಾಣಲು ಆಗಮಿಸಿದ್ದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸುಬ್ರಮಣ್ಯಪುರಂ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.
ನಾನು ಯಾವುದೇ ಹುಟ್ಟಹಬ್ಬದ ದಿನಾಚರಣೆಯನ್ನು ಆಚರಿಸಿಕೊಳ್ಳಲು ಇಷ್ಟಪಟ್ಟಿರಲಿಲ್ಲ. ವರ್ಷಕ್ಕೆ ಒಮ್ಮೆಯಾದರೂ ನಮಗೆ ಸಿಗಬೇಕೆಂದು ಅಭಿಮಾನಿಗಳು ಕೇಳಿಕೊಂಡಿದ್ದರು. ನಾನು ಬೆಳೆದಿದ್ದು ಅಭಿಮಾನಿಗಳಿಂದ ಹೀಗಾಗಿ ಹುಟ್ಟುಹಬ್ಬದ ದಿನವನ್ನು ಅಭಿಮಾನಿಗಳಿಗೆ ಮೀಸಲಿಡಬೇಕೆಂದು ನಿರ್ಧರಿಸಿದ್ದೆ. ಕಳೆದ ಬಾರಿ ಅಭಿಮಾನಿಗಳನ್ನು ಭೇಟಿ ಆಗದೆ ಇರುವುದಕ್ಕೆ ಬೇಸರವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


