'ಪೈಲ್ವಾನ್'ಗಾಗಿ ದೇಹದ ಫಿಟ್ ನೆಸ್ ಕಡೆ ಸುದೀಪ್ ಗಮನ!
ಪೈಲ್ವಾನ ಚಿತ್ರದ ಶೂಟಿಂಗ್ ಹೈದರಾಬಾದ್ ನಲ್ಲಿ ಭರದಿಂದ ಸಾಗುತ್ತಿದೆ. ಚಿತ್ರದ ಪ್ರಮುಖ ಆಕ್ಷನ್ ದೃಶ್ಯ...

ಪೈಲ್ವಾನ ಚಿತ್ರದ ಶೂಟಿಂಗ್ ಹೈದರಾಬಾದ್ ನಲ್ಲಿ ಭರದಿಂದ ಸಾಗುತ್ತಿದೆ. ಚಿತ್ರದ ಪ್ರಮುಖ ಆಕ್ಷನ್ ದೃಶ್ಯ ಮುಗಿದಿದ್ದು ಅದರಲ್ಲಿ ಸುದೀಪ್, ಸುನಿಲ್ ಶೆಟ್ಟಿ, ಶರತ್ ಲೋಹಿತಾಶ್ವ, ಸುಶಾಂತ್ ಸಿಂಗ್ ನಟಿಸಿದ್ದಾರೆ. ಆಕಾಂಕ್ಷ ಸಿಂಗ್ ಅವರ ಭಾಗದ 10 ದಿನಗಳ ಶೂಟಿಂಗ್ ಮುಗಿದಿದೆ.
ಇವೆಲ್ಲಕ್ಕಿಂತ ಮುಖ್ಯವಾಗಿ ಸುದ್ದಿಯಾಗಿದ್ದು ಸುದೀಪ್ ಅವರು ಪೈಲ್ವಾನನಾಗಿದ್ದು, ಶಾರೀರಿಕವಾಗಿ ಅವರ ರೂಪದಲ್ಲಿ ಬಹಳ ಬದಲಾವಣೆಯಾಗಿದೆ. ಮೊನ್ನೆ ಕಿಚ್ಚ ಸುದೀಪ್ ಹುಟ್ಟುಹಬ್ಬದ ದಿನ ಬಿಡುಗಡೆಯಾದ ಚಿತ್ರದ ಟೀಸರ್ ನಲ್ಲಿ ಚಿತ್ರಕ್ಕಾಗಿ ಅವರು ದೇಹ ಹುರಿಗೊಳಿಸಿದ್ದನ್ನು ತೋರಿಸಲಾಗಿತ್ತು. ಕಳೆದ 4 ತಿಂಗಳಿನಿಂದ ಅವರು ಇದಕ್ಕಾಗಿ ಸಮಯ ಮೀಸಲಿಟ್ಟಿದ್ದರು.
ತಮ್ಮ ನೆಚ್ಚಿನ ನಟನನ್ನು ಹೊಸ ರೂಪದಲ್ಲಿ ನೋಡಿದ ಕಿಚ್ಚನ ಅಭಿಮಾನಿಗಳಿಗೆ ನಿಜಕ್ಕೂ ಖುಷಿಯಾಗಿದೆ. ಸುದೀಪ್ ಅವರು ಪ್ರಸ್ತುತ ಶೂಟಿಂಗ್ ಗೆ ವಿರಾಮ ತೆಗೆದುಕೊಂಡು ಕೆಸಿಸಿ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ. ನಂತರ ಇದೇ 10ರಂದು ಶೂಟಿಂಗ್ ತಂಡವನ್ನು ಸೇರಲಿದ್ದಾರೆ. ಹೈದರಾಬಾದ್ ನಲ್ಲಿ ಶೂಟಿಂಗ್ ಮುಗಿದ ನಂತರ ಕರ್ನಾಟಕದ ಒಳ ಭಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ.
ಆರ್ ಆರ್ ಆರ್ ಪ್ರೊಡಕ್ಷನ್ ನಡಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಸ್ವಪ್ನ ಕೃಷ್ಣ ಹಣ ಹೂಡಿದ್ದಾರೆ. ಕಬೀರ್ ದುಹಾನ್ ಸಿಂಗ್ ಕೂಡ ಇದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಮತ್ತು ಕರುಣಾಕರ್ ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


