ಧ್ರುವ ಸರ್ಜಾ 'ಪೊಗರು' ಚಿತ್ರಕ್ಕೆ ಸೋದರ ಮಾವ ಅರ್ಜುನ್ ಸರ್ಜಾ ಚಿತ್ರಕಥೆ!
ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಸದ್ಯ ಪೊಗರು ಚಿತ್ರದಲ್ಲಿ ನಟಿಸುತ್ತಿದ್ದು ಚಿತ್ರವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ...

Published On :
ಸ್ಯಾಂಡಲ್ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯ ಪೊಗರು ಚಿತ್ರದಲ್ಲಿ ನಟಿಸುತ್ತಿದ್ದು ಚಿತ್ರವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ.
ಧ್ರುವ ಪ್ರತಿಯೊಂದು ಚಿತ್ರಕ್ಕೂ ಮುನ್ನ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಅಭಿಪ್ರಾಯ ಕೇಳುವುದು ಸಾಮಾನ್ಯ. ಆದರೆ ಇದೀಗ ಪೊಗರು ಚಿತ್ರಕ್ಕೆ ಅರ್ಜುನ್ ಸರ್ಜಾ ಚಿತ್ರಕಥೆ ಬರೆಯುತ್ತಿರುವುದು ವಿಶೇಷವಾಗಿದೆ.
ಮೊದಲ ಹಂತದ ಚಿತ್ರೀಕರಣಕ್ಕಾಗಿ ಧ್ರುವ ಸರ್ಜಾ ಬರೋಬ್ಬರಿ 30 ಕೆಜಿ ತೂಕವನ್ನು ಇಳಿಸಿಕೊಂಡಿದ್ದರು. ಇದೀಗ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗುತ್ತಿದ್ದು ಮೊದಲು ಇದ್ದ ತೂಕಕ್ಕೆ ಧ್ರುವ ಸರ್ಜಾ ಕಸರತ್ತು ನಡೆಸಿದ್ದಾರೆ.
ನಿರ್ಮಾಪಕ ಗಂಗಾಧರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ನಿರ್ದೇಶಕ ನಂದ ಕಿಶೋರ್ ಅಕ್ಟೋಬರ್ 6ರಂದು ಧ್ರುವ ಸರ್ಜಾರ ಹುಟ್ಟುಹಬ್ಬದ ದಿನ ಚಿತ್ರದ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
arjun sarjaಅರ್ಜುನ್ ಸರ್ಜಾSandalwoodNanda Kishoreನಂದ ಕಿಶೋರ್ಧ್ರುವ ಸರ್ಜಾPogaruಪೊಗರುಸ್ಯಾಂಡಲ್ವುಡ್Dhurva Sarja
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


