ಸಿನಿಮಾ ಸುದ್ದಿ

ಯಶ್ ಅಭಿಮಾನಿಗಳಿಗೆ ಸಿಹಿಸುದ್ದಿ: ಪಂಚ ಭಾಷೆಗಳಲ್ಲಿ 'ಕೆಜಿಎಫ್' ನವೆಂಬರ್ ನಲ್ಲಿ ರಿಲೀಸ್!

ದಕ್ಷಿಣ ಭಾರತದಲ್ಲೇ ಅತಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ...

ಯಶ್ ಅಭಿಮಾನಿಗಳಿಗೆ ಸಿಹಿಸುದ್ದಿ:  ಪಂಚ ಭಾಷೆಗಳಲ್ಲಿ 'ಕೆಜಿಎಫ್' ನವೆಂಬರ್ ನಲ್ಲಿ   ರಿಲೀಸ್!
ಕೆಜಿಎಫ್ ಸಿನಿಮಾ ಪೋಸ್ಟರ್
Published On :
ಬೆಂಗಳೂರು: ದಕ್ಷಿಣ ಭಾರತದಲ್ಲೇ ಅತಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತ ಹಿಂದಿ ಭಾಷೆಯಲ್ಲಿ ಏಕಕಾಲದಲ್ಲಿ ರಿಲೀಸ್ ಮಾಡಲಿದ್ದಾರೆ.
ಸೆನ್ಸಾರ್ ಬೋರ್ಡ್ ಪ್ರದರ್ಶನಕ್ಕೆ ಸಿನಿಮಾ ಸಿದ್ದವಾಗಿದ್ದು, ಅದಾದ ನಂತರ ಅಧಿಕೃತವಾಗಿ ಬಿಡುಗಡೆ ದಿನಾಂಕ ಘೋಷಿಸಲಿದ್ದಾರೆ. ನವೆಂಬರ್ 16 ರಂದು ಕೆಜಿಎಫ್ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ. ನವೆಂಬರ್ ನಲ್ಲಿ ಎರಡು ದಿನಾಂಕ ಇದ್ದು ಶೀಘ್ರವೇ ಅದರಲ್ಲಿ ಒಂದು ದಿನಾಂಕವನ್ನು ಫೈನಲ್ ಮಾಡಲಾಗುವುದು. ತೆಲುಗು ಮತ್ತು ತಮಿಳು ಹಂಚಿಕೆದಾರರನ್ನು ಸಂಪರ್ಕಿಸಿದ ನಂತರ ಡೇಟ್ ಪ್ರಕಟಿಸಲಾಗುತ್ತದೆ. 
ಕೆಜಿಎಫ್ 80ರ ದಶಕದ ಕಥೆಯಾಗಿದ್ದು, ರಾಕಿ ಪಾತ್ರದಲ್ಲಿ ಯಶ್ ನಟಿಸಿದ್ದಾರೆ, ಅತಿ ಹೆಚ್ಚಿನ ಬಜೆಟ್ ಸಿನಿಮಾ ಇದಾಗಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.