ಸಿನಿಮಾ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ 'ಗಂಡುಗಲಿ ಮದಕರಿ ನಾಯಕ'!

ಐತಿಹಾಸಿಕ ಕತೆಯೊಂದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಮ್ಮೆ ಸಹಿ ಮಾಡಿದ್ದು, ಶೀಘ್ರದಲ್ಲಿಯೇ ದರ್ಶನ್ ಅವರು ವೀರಮದಕರಿ ನಾಯಕರಾಗಿ ತೆರೆಯ ಮೇಲೆ ಅಬ್ಬರಿಸಲಿದ್ದಾರೆ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ 'ಗಂಡುಗಲಿ ಮದಕರಿ ನಾಯಕ'!
ಚಾಲೆಂಜಿಂಗ್ ಸ್ಟಾರ್ ದರ್ಶನ್
Published On :
ಐತಿಹಾಸಿಕ ಕತೆಯೊಂದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಮ್ಮೆ ಸಹಿ ಮಾಡಿದ್ದು, ಶೀಘ್ರದಲ್ಲಿಯೇ ದರ್ಶನ್ ಅವರು ವೀರಮದಕರಿ ನಾಯಕರಾಗಿ ತೆರೆಯ ಮೇಲೆ ಅಬ್ಬರಿಸಲಿದ್ದಾರೆ. 
ದರ್ಶನ್ ಅವರಿಗಾಗಿಯೇ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು, ಕಾದಂಬರಿ ಆಧಾರಿಕ ಅಪೂರ್ವ ಐತಿಹಾಸಿಕ ಚಿತ್ರ ನಿರ್ಮಾಣ ಸಾಹಸಕ್ಕೆ ಕೈ ಹಾಕಿದ್ದು, ಚಿತ್ರಕ್ಕೆ ದರ್ಶನ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. 
ಈ ಹಿಂದೆ ಸಂಗೊಳ್ಳಿ ರಾಯಣ್ಣನಾಗಿ ತೆರೆಯ ಮೇಲೆ ಗರ್ಜಿಸಿದ್ದ ದರ್ಶನ್ ಅವರು, ಇದೀಗ ಕುರುಕ್ಷೇತ್ರದಲ್ಲಿ ದುರ್ಯೋಧನ ಪಾತ್ರದಲ್ಲಿ ಮಿಂಚಿದ್ದಾರೆ. ಕುರುಕ್ಷೇತ್ರ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದ್ದು, ಈ ನಡುವಲ್ಲೇ ದರ್ಶನ್ ಅವರು ಕೋಟೆ ನಾಡಿನ ಮದಕರಿ ನಾಯಕನಾಗಿ ಅಭಿಮಾನಿಗಳ ಮುಂದೆ ಬರಲು ಸಿದ್ಧವಾಗುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.