ಸಿನಿಮಾ ಸುದ್ದಿ

ನಟ ದುನಿಯಾ ವಿಜಿಗೆ 14 ದಿನಗಳ ನ್ಯಾಯಾಂಗ ಬಂಧನ :8ನೇ ಎಸಿಎಂಎಂ ಕೋರ್ಟ್ ಆದೇಶ!

ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಟ ದುನಿಯಾ ವಿಜಿಗೆ 14 ದಿನಗಳ ನ್ಯಾಯಾಂಗ ಬಂಧನ :8ನೇ ಎಸಿಎಂಎಂ ಕೋರ್ಟ್ ಆದೇಶ!
ದುನಿಯಾ ವಿಜಿ ಚಿತ್ರ
Published On :

ಬೆಂಗಳೂರು:ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಿಯನ್ನು  14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಖ್ಯಾತ ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ  ಅವರನ್ನು ಅಪಹರಿಸಿ, ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ  ದುನಿಯಾ ವಿಜಿ ಹಾಗೂ ಆತನ ಗ್ಯಾಂಗ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ 8 ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಇಂದು ರಾತ್ರಿ ಈ ಪ್ರಕರಣದ ವಿಚಾರಣೆ ನಡೆಸಿದ  8 ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಧೀಶರು ಈ ತೀರ್ಪು ಪ್ರಕಟಿಸಿದ್ದಾರೆ. 
ನಂತರ  ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿರುವ ಕಾರಾಗೃಹಕ್ಕೆ ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು. ಬಳಿಕ ಆಸ್ಪತ್ರೆ ಜೈಲಿನಲ್ಲಿ ವೈದ್ಯಕೀಯ ತಪಾಸಣೆ ನಡೆಸಿ  ವಿಶೇಷ ಭದ್ರತಾ ವ್ಯವಸ್ಥೆ ಹೊಂದಿರುವ ಕೊಠಡಿಯನ್ನು ವಿಜಿಗೆ ನೀಡಲಾಯಿತು. ಆತನ ಸಹಚರರಿಗೆ ಪ್ರತ್ಯೇಕ ಬ್ಯಾರಕ್ ವ್ಯವಸ್ಥೆ ಮಾಡಲಾಗಿದೆ.
ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಪಾನಿ ಪೂರಿ ಕಿಟ್ಟಿ , ದುನಿಯಾ ವಿಜಿ ಹಾಗೂ ಆತನ ಸಹಚರರು ನಡೆಸಿದ ಹಲ್ಲೆಯಿಂದ ಮಾರುತಿ ಗೌಡ  ಕಣ್ಣು , ಮೂಗು, ಕಿವಿಯ ಸಮಸ್ಯೆ ಉಂಟಾಗಿದ್ದು, ಸಿಟಿ ಸ್ಕ್ಯಾನಿಂಗ್ ವರದಿ ಇನ್ನೂ ತಿಳಿದುಬಂದಿಲ್ಲ. ನಾಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ವಿಶೇಷ ಅಭಿಯೋಜಕರನ್ನು ನೇಮಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.