ಭರ್ಜರಿ ರೇಸಿಂಗ್ ದೃಶ್ಯಗಳ ಚಿತ್ರೀಕರಣಕ್ಕಾಗಿ ಸ್ವಿಜರ್‌ಲ್ಯಾಂಡ್‌ಗೆ 'ಅಮರ್' ಚಿತ್ರತಂಡ!
ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಶೇಕ್ ಅಭಿನಯದ ಅಮರ್ ಚಿತ್ರದ ಚಿತ್ರೀಕರಣ ಕರ್ನಾಟಕ ಹಾಗೂ ನೆರೆ ರಾಜ್ಯಗಳಲ್ಲಿ ಭರ್ಜರಿ ನಡೆದಿದ್ದು ಇದೀಗ ಚಿತ್ರ ತಂಡ ಸ್ವಿಜರ್‌ಲ್ಯಾಂಡ್‌ಗೆ ಪ್ರಯಾಣ ಬೆಳೆಸಲಿದೆ...

Published On :
ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಶೇಕ್ ಅಭಿನಯದ ಅಮರ್ ಚಿತ್ರದ ಚಿತ್ರೀಕರಣ ಕರ್ನಾಟಕ ಹಾಗೂ ನೆರೆ ರಾಜ್ಯಗಳಲ್ಲಿ ಭರ್ಜರಿ ನಡೆದಿದ್ದು ಇದೀಗ ಚಿತ್ರ ತಂಡ ಸ್ವಿಜರ್‌ಲ್ಯಾಂಡ್‌ಗೆ ಪ್ರಯಾಣ ಬೆಳೆಸಲಿದೆ.
ಅಮರ್ ಚಿತ್ರವನ್ನು ನಾಗಶೇಕರ್ ನಿರ್ದೇಶನ ಮಾಡುತ್ತಿದ್ದಾರೆ. ಸ್ವಿಜರ್‌ಲ್ಯಾಂಡ್ ನಲ್ಲಿ 20 ದಿನಗಳ ಚಿತ್ರೀಕರಣ ನಡೆಸಲಿದ್ದು ಇದಕ್ಕಾಗಿ ಚಿತ್ರತಂಡ ವೀಸಾಗೆ ಅರ್ಜಿ ಹಾಕಿದೆ. ಚಿತ್ರದ ರೇಸಿಂಗ್ ದೃಶ್ಯಗಳನ್ನು ಸ್ವಿಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗುತ್ತದೆ.
ಅಮರ್ ಚಿತ್ರ ಸಂದೇಶ್ ಪ್ರೋಡೆಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ. ಅಭಿಶೇಕ್ ಗೆ ಜೋಡಿಯಾಗಿ ತನ್ಯ ಹೋಪ್ ಅಭಿನಯಿಸುತ್ತಿದ್ದು ಇಬ್ಬರು ಚಿತ್ರದಲ್ಲಿ ಬೈಕ್ ರೈಡರ್ಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಸದ್ಯ ಕೊಯಂಬತ್ತೂರ್, ಬೆಳಗಾಂ, ಮಣಿಪಾಲ್, ಮಂಗಳೂರು, ಮಡಿಕೇರಿ, ಸೋಮವಾರಪೇಟೆ, ಗೋಣಿಕೋಪ್ಪ ಮತ್ತು ಕೇರಳದ ಕೆಲ ಭಾಗಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


