ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ ನಿರ್ದೇಶನದ 'ಪುಣ್ಯಕೋಟಿ'ಗೆ ಚರಣ್ ರಾಜ್, ಕರ್ಮ್ ಚಾವ್ಲಾ

ಅವನೇ ಶ್ರೀಮನ್ನಾರಾಯಣ, 777 ಚಾರ್ಲಿ ಸಿನಿಮಾಗಳ ಕೆಲಸದಲ್ಲಿ ಈಗಾಗಲೇ ಕಾರ್ಯನಿರತರಾಗಿರುವ ರಕ್ಷಿತ್ ಶೆಟ್ಟಿ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಳ್ಳುವ ಸಿದ್ಧತೆ ನಡೆಸಿದ್ದಾರೆ.

ರಕ್ಷಿತ್ ಶೆಟ್ಟಿ ನಿರ್ದೇಶನದ 'ಪುಣ್ಯಕೋಟಿ'ಗೆ ಚರಣ್ ರಾಜ್, ಕರ್ಮ್ ಚಾವ್ಲಾ
ರಕ್ಷಿತ್ ಶೆಟ್ಟಿ ನಿರ್ದೇಶನದ ಪುಣ್ಯಕೋಟಿಗೆ ಚರಣ್ ರಾಜ್, ಕರ್ಮ್ ಚಾವ್ಲಾ
Published On :
ಅವನೇ ಶ್ರೀಮನ್ನಾರಾಯಣ, 777 ಚಾರ್ಲಿ ಸಿನಿಮಾಗಳ ಕೆಲಸದಲ್ಲಿ ಈಗಾಗಲೇ ಕಾರ್ಯನಿರತರಾಗಿರುವ ರಕ್ಷಿತ್ ಶೆಟ್ಟಿ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಳ್ಳುವ ಸಿದ್ಧತೆ ನಡೆಸಿದ್ದಾರೆ. 
ಪುಣ್ಯಕೋಟಿ ಕಥೆಗೆ ಮನುಷ್ಯ ರೂಪ ನೀಡಿ ತೆರೆ ಮೇಲೆ ತರಲು ರಕ್ಷಿತ್ ಶೆಟ್ಟಿ ಯೋಜನೆ ರೂಪಿಸಿದ್ದು, ಈ ಸಿನಿಮಾಗೆ ನಿರ್ದೇಶಕನ ಕ್ಯಾಪ್ ಧರಿಸಲಿದ್ದಾರೆ. 
ಅವನೇ ಶ್ರೀಮನ್ನಾರಾಯಣ ಚಿತ್ರತಂಡದ ಬಹುತೇಕರು ಪುಣ್ಯಕೋಟಿ ಚಿತ್ರದಲ್ಲೂ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.  ಸಂಗೀತ ನಿರ್ದೇಶಕ ಚರಣ್ ರಾಜ್ ಹಾಗೂ ಸಿನಿಮೆಟ್ರೋಗ್ರಾಫರ್ ಕರ್ಮ್ ಚಾವ್ಲಾ ರಕ್ಷಿತ್ ಶೆಟ್ಟಿ ಜೊತೆಗೆ ಪುಣ್ಯಕೋಟಿ ಚಿತ್ರಕ್ಕೆ ಕೆಲಸ ಮಾಡಲಿದ್ದಾರೆ. 
ಈ ಚಿತ್ರವನ್ನು ಕನ್ನಡ ಹಾಗೂ ಇನ್ನಿತರ ಹಲವು ಭಾಷೆಗಳಲ್ಲೂ ಬಿಡುಗಡೆ ಮಾಡುವ ಯೋಜನೆ ಹೊಂದಿದ್ದಾರೆ ರಕ್ಷಿತ್ ಶೆಟ್ಟಿ. 2020 ಕ್ಕೆ ಪುಣ್ಯಕೋಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.