'ಪೈಲ್ವಾನ್ 'ಚಿತ್ರದ ಆಡಿಯೊ ಬಿಡುಗಡೆಗೆ ಮುಹೂರ್ತ ಫಿಕ್ಸ್ : ಆ. 9 ರಂದು ಚಿತ್ರದುರ್ಗದಲ್ಲಿ ಸಮಾರಂಭ
ಕಿಚ್ಚ ಸುದೀಪ್ ಹಾಗೂ ಸುನೀಲ್ ಶೆಟ್ಟಿ ಅಭಿನಯದ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ 'ಪೈಲ್ವಾನ್ 'ಚಿತ್ರದ ಆಡಿಯೊ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

Published On :
ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಸುನೀಲ್ ಶೆಟ್ಟಿ ಅಭಿನಯದ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ 'ಪೈಲ್ವಾನ್ 'ಚಿತ್ರದ ಆಡಿಯೊ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ಆಗಸ್ಟ್ 9 ರಂದು ಚಿತ್ರದುರ್ಗದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಸೆಪ್ಟೆಂಬರ್ 12 ರಂದು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ತೆರೆಗೆ ಅಪ್ಪಳಿಸಿದೆ.
ಆಡಿಯೊ ಬಿಡುಗಡೆಯ ಕ್ಷಣಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಜುಲೈ 27 ರಂದೇ ಆಡಿಯೋ ಬಿಡುಗಡೆಯಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಆಡಿಯೋ ಬಿಡುಗಡೆಗೆ ವಿಳಂಬವಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ.
ಚಿತ್ರದಲ್ಲಿ ಆರು ಹಾಡುಗಳು ಮತ್ತು ಎರಡು ಥೀಮ್ ಸಾಂಗ್ ಗಳಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಕೃಷ್ಣ ನಿರ್ದೇಶದ ಈ ಚಿತ್ರದಲ್ಲಿ ಆಕಾಂಕ್ಷಾ ಸಿಂಗ್ ನಾಯಕಿಯಾಗಿದ್ದು, ಬಾಲಿವುಡ್ ನಟ ಸುನೀಲ್ ಶೆಟ್ಟಿ, ಕಬೀನ್ ದುಹಾನ್ ಸಿಂಗ್, ಶರತ್ ಲೋಹಿತಾಶ್ವ ಮತ್ತಿತರರ ತಾರಾಗಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


