ಸಿನಿಮಾ ಸುದ್ದಿ

'ಪೈಲ್ವನ್' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ಭಾಗಿ!

ವರಮಹಾಲಕ್ಷ್ಮಿ ಹಬ್ಬವಾದ ನಾಳೆ ಕಿಚ್ಚ ಸುದೀಪ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಹಬ್ಬ. ಕಾರಣ ಸ್ಯಾಂಡಲ್ ವುಡ್ ನ ಮೇರು ನಟರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

'ಪೈಲ್ವನ್' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ಭಾಗಿ!
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬವಾದ ನಾಳೆ ಕಿಚ್ಚ ಸುದೀಪ್ ಹಾಗೂ ಪವರ್  ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಹಬ್ಬ. ಕಾರಣ ಸ್ಯಾಂಡಲ್ ವುಡ್ ನ ಮೇರು ನಟರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪೈಲನ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಾಳೆ ಚಿತ್ರದುರ್ಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಇವರೊಂದಿಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿ , ಲಹರಿ ವೇಲು ವೇದಿಕೆಯಲ್ಲಿ ಇರಲಿದ್ದಾರೆ.
ಕೃಷ್ಣ ನಿರ್ದೇಶನದ ಈ ಚಿತ್ರದಲ್ಲಿ ಅಕಾಂಕ್ಷ ಸಿಂಗ್ , ಸುಶಾಂತ್ ಸಿಂಗ್ ಮಹಿಳಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆರ್ ಆರ್ ಆರ್ ಮೋಷನ್ ಪಿಕ್ಟರ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. 
ಅರ್ಜುನ್ ಜಸ್ಯ ಆರು ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸೆಪ್ಟೆಂಬರ್ 12 ರಂದು ಹಿಂದಿ, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ  ಬಿಡುಗಡೆಯಾಗಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.