ಸಿನಿಮಾ ಸುದ್ದಿ

ಪುಟ್ಟ 'ಲಕ್ಷ್ಮಿ'ಗೆ ತಾಯಿಯಾದ ಶೃತಿ ಹರಿಹರನ್ 

ಪ್ರತಿಭಾವಂತ ನಟಿ ಶ್ರುತಿ ಹರಿಹರನ್ ಡಬಲ್ ಸಂಭ್ರಮದಲ್ಲಿದ್ದಾರೆ. ಒಂದೆಡೆ ತಮ್ಮ ಅಭಿನಯದ ನಾತಿಚರಾಮಿ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಿಕ್ಕಿದರೆ ಇನ್ನೊಂದೆಡೆ ತಮ್ಮ ವೈಯಕ್ತಿಕ ಜೀವನದಲ್ಲಿ ಅಮ್ಮನಾಗಿದ್ದಾರೆ.

ಪುಟ್ಟ 'ಲಕ್ಷ್ಮಿ'ಗೆ ತಾಯಿಯಾದ ಶೃತಿ ಹರಿಹರನ್ 
ಶೃತಿ ಹರಿಹರನ್
Published On :

ಬೆಂಗಳೂರು: ಪ್ರತಿಭಾವಂತ ನಟಿ ಶ್ರುತಿ ಹರಿಹರನ್ ಡಬಲ್ ಸಂಭ್ರಮದಲ್ಲಿದ್ದಾರೆ. ಒಂದೆಡೆ ತಮ್ಮ ಅಭಿನಯದ ನಾತಿಚರಾಮಿ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಿಕ್ಕಿದರೆ ಇನ್ನೊಂದೆಡೆ ತಮ್ಮ ವೈಯಕ್ತಿಕ ಜೀವನದಲ್ಲಿ ಅಮ್ಮನಾಗಿದ್ದಾರೆ.ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.


ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಶ್ರುತಿ ಹರಿಹರನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಶ್ರುತಿ ಹರಿಹರನ್ ತಾವು ಗರ್ಭವತಿಯಾಗಿರುವ ಮತ್ತು ಸೀಮಂತದ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದರು. 


ಶ್ರುತಿ ಹರಿಹರನ್ ಅಭಿನಯದ ‘ನಾತಿಚರಾಮಿ’ ಸಿನಿಮಾಗೆ 5 ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ, ಅತ್ಯುತ್ತಮ ಹಿನ್ನೆಲೆ ಗಾಯಕಿ, ಅತ್ಯುತ್ತಮ ಸಾಹಿತ್ಯ, ಅತ್ಯುತ್ತಮ ಎಡಿಟಿಂಗ್ ಹಾಗೂ ಸಿನಿಮಾ ನಟಿ ಶೃತಿ ಹರಿಹರನ್ ಅವರಿಗೆ ವಿಶೇಷ ಅಭಿನಯದ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.


ಕಳೆದ ವರ್ಷ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡುವ ಮೂಲಕ ಶ್ರುತಿ ಹರಿಹರನ್ ಭಾರೀ ಸುದ್ದಿ ಮಾಡಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಸಂದರ್ಭದಲ್ಲಿ ಅವರು ಮದುವೆಯಾಗಿರುವ ವಿಚಾರ ಬಹಿರಂಗವಾಗಿತ್ತು. ಅಲ್ಲಿಯವರೆಗೆ ಅವರು ತಾನು ಮದುವೆಯಾಗಿದ್ದೇನೆ ಎನ್ನುವ ವಿಚಾರವನ್ನು ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಶ್ರುತಿ ಕೇರಳದ ಡ್ಯಾನ್ಸ್ ಮಾಸ್ಟರ್, ಕಲರಿ ಪಟ್ಟು ಕಲಾವಿದ ರಾಮ್ ಕುಮಾರ್ ಅವರನ್ನು ಮದುವೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.