ಸಿನಿಮಾ ಸುದ್ದಿ

ಮತ್ತೆ ಜಗಳವಾಡಿಕೊಂಡ್ರ ದರ್ಶನ್-ವಿಜಯಲಕ್ಷ್ಮಿ ದಂಪತಿ: ಇಲ್ಲಿದೆ ಡಿ ಬಾಸ್ ಪತ್ನಿಯ ಸ್ಪಷ್ಟನೆ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ ಕಳೆದ ವಾರ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದರ ಮಧ್ಯೆ ದರ್ಶನ್ ಮತ್ತು ವಿಜಯಲಕ್ಷ್ಮೀ ದಂಪತಿ ಮತ್ತೆ ಗಲಾಟೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಮತ್ತೆ ಜಗಳವಾಡಿಕೊಂಡ್ರ ದರ್ಶನ್-ವಿಜಯಲಕ್ಷ್ಮಿ ದಂಪತಿ: ಇಲ್ಲಿದೆ ಡಿ ಬಾಸ್ ಪತ್ನಿಯ ಸ್ಪಷ್ಟನೆ!
Published On :

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ ಕಳೆದ ವಾರ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದರ ಮಧ್ಯೆ ದರ್ಶನ್ ಮತ್ತು ವಿಜಯಲಕ್ಷ್ಮೀ ದಂಪತಿ ಮತ್ತೆ ಗಲಾಟೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. 

ನಟ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ತಾಯಿಗೆ ಹೊಡೆದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಹಲವು ಮಾತುಗಳು ಕೇಳಿಬಂದಿತ್ತು. ಆದರೆ ಈ ಎಲ್ಲ ವದಂತಿಗಳಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ.

ವಿಜಯಲಕ್ಷ್ಮಿ ಅವರು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ವದಂತಿಯನ್ನು ಅಲ್ಲಗಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಗಾಳಿ ಸುದ್ದಿಗೆ ಆಧಾರವಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಹಬ್ಬಿರುವ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.