ರಾಕಿಭಾಯ್‍ಗೆ ಒಲಿದು ಬಂತು ಪ್ರತಿಷ್ಠಿತ ಸೈಮಾ ಪ್ರಶಸ್ತಿ!
ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಗೆ ಈ ಸಾಲಿನ ಸೈಮಾ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಲಭಿಸಿದೆ.

ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಗೆ ಈ ಸಾಲಿನ ಸೈಮಾ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಲಭಿಸಿದೆ.
ಕತಾರ್ ನಲ್ಲಿ ನಡೆಯುತ್ತಿರುವ ಎಂಟನೇ ದಕ್ಷಿಣ ಭಾರತ ಅಂತರಾಷ್ಟ್ರೀಯ ಸೈಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ "ಕೆಜಿಎಫ್ ಚಾಪ್ಟರ್ 1" ಚಿತ್ರದ ಅಭಿನಯಕ್ಕಾಗಿ ರಾಕಿಭಾಯ್ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಗಳಿಸಿಕೊಂಡಿದ್ದಾರೆ.
ಇದಲ್ಲದೆ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿದೆ.
ಇನ್ನುಳಿದಂತೆ ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಸಿನಿಮಾದಲ್ಲಿನ ಅಭಿನಯಕ್ಕಾಗಿ ಪ್ರಕಾಶ್ ಥುಮಿನರ್ ಅತ್ಯುತ್ತಮ ಹಾಸ್ಯ ನಟ, ಟಗರು ಚಿತ್ರದಲ್ಲಿನ ಡಾಲಿ ಪಾತ್ರದ ಧನಂಜಯ್ ಅತ್ಯುತ್ತಮ ಖಳನಟ, ಕೆಜಿಫ್ ನಲ್ಲಿ ತಾಯಿ ಪಾತ್ರಧಾರಿಯಾಗಿದ್ದ ನಟಿ ಅರ್ಚನಾಅತ್ಯುತ್ತಮ ಪೋಷಕ ನಟಿ, ಅಯೋಗ್ಯ ನಿರ್ದೇಶಕ ಮಹೇಶ್ ಕುಮಾರ್ ಅತ್ಯುತ್ತಮ ಡೆಬ್ಯು ನಿರ್ದೇಶಕ ಆ ಕರಾಳ ರಾತ್ರಿ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅತ್ಯುತ್ತಮ ಡೆಬ್ಯು ನಟಿ ಪ್ರಶಸ್ತಿ ಗಳಿಸಿಕೊಂಡಿದ್ದಾರೆ.
;
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


