ಸಿನಿಮಾ ಸುದ್ದಿ

ಕ್ರೇಜಿಸ್ಟಾರ್  ರವಿಚಂದ್ರನ್ ನಿರ್ದೇಶನದಲ್ಲಿ ಕೆಲಸ ಮಾಡೋದೆ ಅದೃಷ್ಟ- ಸುದೀಪ್ 

'ರವಿಬೊಪ್ಪಣ' ಚಿತ್ರದ ಸೆಟ್ ನಲ್ಲಿ ಮಾತನಾಡಿದ ಸುದೀಪ್, ರವಿಚಂದ್ರನ್ ನಿರ್ದೇಶನದಡಿಯಲ್ಲಿ ಕೆಲಸ ಮಾಡೋದೆ ಅದೃಷ್ಟ ಎಂದರು.

ಕ್ರೇಜಿಸ್ಟಾರ್  ರವಿಚಂದ್ರನ್ ನಿರ್ದೇಶನದಲ್ಲಿ ಕೆಲಸ ಮಾಡೋದೆ ಅದೃಷ್ಟ- ಸುದೀಪ್ 
ರವಿಚಂದ್ರನ್, ಸುದೀಪ್
Published On :

ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಬರುತ್ತಿದೆ. ರವಿಚಂದ್ರನ್ ನಿರ್ದೇಶನದ ಈ ಚಿತ್ರದಲ್ಲಿ ಸುದೀಪ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ವಕೀಲನ ಪಾತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದಾರೆ. 


'ರವಿಬೊಪ್ಪಣ' ಚಿತ್ರದ ಸೆಟ್ ನಲ್ಲಿ ಮಾತನಾಡಿದ ಸುದೀಪ್, ರವಿಚಂದ್ರನ್ ನಿರ್ದೇಶನದಡಿಯಲ್ಲಿ ಕೆಲಸ ಮಾಡೋದೆ ಅದೃಷ್ಟ ಎಂದರು.

ರವಿಚಂದ್ರನ್ ಮಕ್ಕಳಾದ ಮನೋರಂಜನ್ ಮತ್ತು ವಿಕ್ರಮ್ ಅವರಿಗಿಂತ ಮುಂಚಿತವಾಗಿ ರವಿಚಂದ್ರನ್ ನಿರ್ದೇಶನದಡಿಯಲ್ಲಿ ಕೆಲಸ ಮಾಡುವ ಅವಕಾಶ ಪಡೆದಿದ್ದೇನೆ. ಅವರು ಅನೇಕ ನಿರ್ದೇಶಕರಿಗೆ ಸ್ಪೂರ್ತಿದಾಯಕರಾಗಿದ್ದಾರೆ. ಹಳೆಯ ರವಿಚಂದ್ರನ್  ಆಗಿ ಮತ್ತೆ ಮಿಂಚಲು ನೋಡಬಯಸುತ್ತೇನೆ. ಇಂತಹ ಚಿತ್ರಗಳನ್ನು ಈ ಹಿಂದೆಯೇ ಮಾಡಿದ್ದಾರೆ ಎಂದು ಹೇಳಿದರು.  ರವಿಚಂದ್ರನ್ ನಿರ್ದೇಶನದ ಅಪೂರ್ವ ಚಿತ್ರದಲ್ಲೂ ಸುದೀಪ್ ಅಭಿನಯಿಸಿದ್ದರು.

ಕ್ಲೈಮ್ಯಾಕ್ಸ್ ನಲ್ಲಿ ಬರುವ ಸುದೀಪ್ ಪಾತ್ರ ರವಿಬೊಪ್ಪಣ ಚಿತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲಿದೆ. ನಿರ್ದೇಶನದ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿರುವುದು ಹೆಚ್ಚಿನ ಸಂತೋಷವನ್ನುಂಟುಮಾಡಿದೆ ಎಂದು ರವಿಚಂದ್ರನ್ ನುಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.