ಭರಾಟೆ ಚಿತ್ರದ ಎರಡು ಹಾಡುಗಳು ಸ್ವಿಟ್ಜರ್ಲೆಂಡ್ ನಲ್ಲಿ ಚಿತ್ರೀಕರಣ
ಚೇತನ್ ಕುಮಾರ್ ನಿರ್ದೇಶನದ ಭರಾಟೆ ಚಿತ್ರದ ಎರಡು ಹಾಡುಗಳನ್ನು ವಿದೇಶದಲ್ಲಿ ಚಿತ್ರೀಕರಿಸಿದ್ದಾರೆ. ಶ್ರೀಮರುಳಿ ಹಾಗೂ ಶ್ರೀಲೀಲಾ ಅಭಿನಯದ ಭರಾಟೆ ಚಿತ್ರದ ಎರಡು ಹಾಡುಗಳನ್ನು ಸ್ವಿಟ್ಜರ್ಲೆಂಡ್ ನ ಸುಂದರ ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ.

ಬೆಂಗಳೂರು: ಚೇತನ್ ಕುಮಾರ್ ನಿರ್ದೇಶನದ ಭರಾಟೆ ಚಿತ್ರದ ಎರಡು ಹಾಡುಗಳನ್ನು ವಿದೇಶದಲ್ಲಿ ಚಿತ್ರೀಕರಿಸಿದ್ದಾರೆ. ಶ್ರೀಮರುಳಿ ಹಾಗೂ ಶ್ರೀಲೀಲಾ ಅಭಿನಯದ ಭರಾಟೆ ಚಿತ್ರದ ಎರಡು ಹಾಡುಗಳನ್ನು ಸ್ವಿಟ್ಜರ್ಲೆಂಡ್ ನ ಸುಂದರ ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ.
ಹರ್ಷ ನೃತ್ಯ ಸಂಯೋಜಿಸಿರುವ ಎರಡು ಮೆಲೂಡಿ ಹಾಡುಗಳನ್ನು ಆರು ನಗರಗಳಲ್ಲಿ ಚಿತ್ರೀಕರಿಸಲಾಗಿದ್ದು, ಕೆಲ ಪೋಟೋಗಳನ್ನು ಚೇತನ್ ಕುಮಾರ್ ಹಂಚಿಕೊಂಡಿದ್ದಾರೆ.
ಇಂಟರ್ ಲಾಕೆನ್, ಬೆರ್ನ್, ತೂನ್, ಸ್ಯಾನಿನ್, ಜಿಸ್ಟಾಡ್ , ಪ್ರೈಬರ್ಗ್ ಮೊದಲಾದ ಕಡೆಗಳಲ್ಲಿ ಸುತ್ತಾಡಿ ಈ ಹಾಡುಗಳನ್ನು ಚಿತ್ರೀಕರಿಸಲಾಗಿದೆ. ವಿದೇಶಗಳಲ್ಲಿ ಚಿತ್ರೀಕರಣ ವಿಭಿನ್ನ ಅನುಭವ ನೀಡುತ್ತದೆ. ಸ್ವಿಟ್ಜರ್ಲೆಂಡ್ ನ ಅತ್ಯುತ್ತಮ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಿರುವುದಾಗಿ ಚೇತನ್ ಕುಮಾರ್ ತಿಳಿಸಿದ್ದಾರೆ.
ಸುಪ್ರಿತ್ ನಿರ್ಮಿಸಿರುವ ಭರಾಟೆ ಚಿತ್ರದ ಹಾಡುಗಳು ಈ ವಾರಾಂತ್ಯದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ರಚಿತಾ ರಾಮ್ ಜೊತೆಗೆ ವಿಶೇಷವಾದ ಹಾಡೊಂದಿದೆ. ಸದ್ಯ ರೀರೆಕಾರ್ಡಿಂಗ್ ಹಂತದಲ್ಲಿರುವ ಈ ಚಿತ್ರವನ್ನು ಸೆಪ್ಟೆಂಬರ್ 27 ರಂದು ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


