ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟನಿಂದ ಪತ್ನಿಯ ಮೇಲೆ ಹಲ್ಲೆ: ಪ್ರಕರಣ ದಾಖಲು

ಕನ್ನಡದ 'ಹುಲಿರಾಯ' ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಬಾಲು ನಾಗೇಂದ್ರ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬಾಲು ನಾಗೇಂದ್ರ ಅವರ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟನಿಂದ ಪತ್ನಿಯ ಮೇಲೆ ಹಲ್ಲೆ: ಪ್ರಕರಣ ದಾಖಲು
ಬಾಲು ನಾಗೇಂದ್ರ
Published On :

ಕನ್ನಡದ 'ಹುಲಿರಾಯ' ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಬಾಲು ನಾಗೇಂದ್ರ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬಾಲು ನಾಗೇಂದ್ರ ಅವರ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

ರೇಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಅವರ ಪತ್ನಿ ಪ್ರತಿ ತಿಂಗಳು ತವರು ಮನೆಗೆ ಒಂದಿಷ್ಟು ಹಣ ಕಳುಹಿಸುತ್ತಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ನಟ, ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವರದಿ ಮಾಡಲಾಗಿದೆ. ಬಲವಂತವಾಗಿ ಕೆಲಸಕ್ಕೆ ಹೋಗು ಎಂದು ಒತ್ತಡ ಹಾಕುತ್ತಿದ್ದ ನಟ ಕೆಲಸಕ್ಕೆ ಕರೆದುಕೊಂಡು ಹೋಗುವಾಗಲೂ ಥಳಿಸುತ್ತಿದ್ದ ಎಂದು ಪತ್ನಿ ದೂರಿದ್ದಾರೆ.

ಕೆಲಸಕ್ಕೆ ಹೋಗುವುದಿಲ್ಲ, ನಾನು ಓದುತ್ತೇನೆ ಎಂದಾಗಲೂ, ಇಲ್ಲ ಕೆಲಸಕ್ಕೆ ಹೋಗಲೇಬೇಕು ಎಂದು ಒತ್ತಡ ಹಾಕಿ ಕಳುಹಿಸುತ್ತಿದ್ದ. ಈಗ ನನ್ನ ಮತ್ತು ಮಗು ಮೇಲೆ ಹಲ್ಲೆ ಮಾಡಿ ತವರು ಮನಗೆ ಕಳುಹಿಸಿದ್ದಾನೆ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಬಾಲು ನಾಗೇಂದ್ರ ಅವರ ಪತ್ನಿ ನೀಡಿದ ದೂರಿನ ಅನ್ವಯ ಬಸವನಗುಡಿ ಮಹಿಳಾ ಪೊಲೀಸರು ಸೆಕ್ಷನ್ 498ಎ ಪ್ರಕಾರ ಕೇಸ್ ದಾಖಲಿಸಿಕೊಂಡಿದ್ದಾರೆ. 

ಹುಲಿರಾಯ ಚಿತ್ರದ ಜೊತೆಗೆ ಕಪಟನಾಟಕ ಪಾತ್ರಧಾರಿ, ಕಡ್ಡಿಪುಡಿ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಬಾಲು ನಾಗೇಂದ್ರ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.