'ಕರ್ಮಣ್ಯೇ ವಾಧಿಕಾರಸ್ತೇ' ಚೊಚ್ಚಲ ಚಿತ್ರದ ಮೂಲಕ ಪ್ರತೀಕ್ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ
ಶ್ರೀ ಹರಿ ಆನಂದ್ ನಿರ್ದೇಶನ ಮಾಡಿರುವ ಚೊಚ್ಚಲ ಚಿತ್ರಕ್ಕೆ 'ಕರ್ಮಣ್ಯೇ ವಾಧಿಕಾರಸ್ತೇ' ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ನೀಡುತ್ತಿದ್ದಾರೆ.

ಬೆಂಗಳೂರು: ಶ್ರೀ ಹರಿ ಆನಂದ್ ನಿರ್ದೇಶನ ಮಾಡಿರುವ ಚೊಚ್ಚಲ ಚಿತ್ರಕ್ಕೆ 'ಕರ್ಮಣ್ಯೇ ವಾಧಿಕಾರಸ್ತೇ' ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ನೀಡುತ್ತಿದ್ದಾರೆ. ಅವರೊಂದಿಗೆ ದಿವ್ಯಾಗೌಡ ಹಾಗೂ ಸಿರಿಂಗ್ ದೊಲ್ಮಾ ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ.
ಮೂಲತ: ನೇಪಾಳದ ಸಿರಿಂಗ್ ಮುಂಬೈಯಲ್ಲಿ ನೆಲೆಸಿದ್ದಾರೆ. ನಮ್ಮ ಚಿತ್ರದಲ್ಲಿ ಆಕೆ ಚೀನಾದಿಂದ ಭಾರತಕ್ಕೆ ಒಂದು ವಾರಗಳ ಕಾಲ ಭೇಟಿ ನೀಡಿರುತ್ತಾರೆ ಎಂದು ನಿರ್ದೇಶಕ ಶ್ರೀಹರಿ ಚಿತ್ರದ ಟೀಸರ್ ಬಿಡುಗಡೆ ಸಂದರ್ಭದಲ್ಲಿ ತಿಳಿಸಿದರು.
1850ರ ಕಾಲಘಟ್ಟದಿಂದ ಶುರುವಾಗಿ ಈಗಿನ ಕಾಲಘಟ್ಟದಲ್ಲಿ ಮುಗಿಯುವ ಕಥೆಯೊಂದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆಯಂತೆ. ಶ್ರೀಹರಿ ಈ ಹಿಂದೆ ಎರಡು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಆ ಚಿತ್ರಗಳನ್ನು ಇನ್ನೂ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.
ಖಿತ್ವಿಕ್ ಮುರುಳೀಧರ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದು, ಉದಯ್ ಲೀಲಾ ವಾಯಾಗ್ರಾಹಣ ಮಾಡಲಿದ್ದಾರೆ. ಸಂತೋಷ್ ನಾಯಕ್ ಹಾಗೂ ವಿಜಿತ್ ಚಂದ್ರ ಹಾಡುಗಳನ್ನು ಬರೆದಿದ್ದಾರೆ. ಪೋಸ್ಟ್ ಪ್ರೋಡಕ್ಷನ್ ಕೆಲಸ ನಡೆಯುತ್ತಿದ್ದು, ನವೆಂಬರ್ ನಲ್ಲಿ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


