ಬಹುಭಾಷಾ ನಟಿ ನಮಿತಾ ಬಿಜೆಪಿಗೆ ಸೇರ್ಪಡೆ
ದಕ್ಷಿಣ ಭಾರತದ ಖ್ಯಾತ ನಟಿ ನಮಿತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಸಮ್ಮುಖದಲ್ಲಿ ಅವರು ಶನಿವಾರ ನಡೆದ ಸಮಾರಂಭದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು.

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ನಮಿತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಸಮ್ಮುಖದಲ್ಲಿ ಅವರು ಶನಿವಾರ ನಡೆದ ಸಮಾರಂಭದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು.
ರವಿಚಂದ್ರನ್ ಅಭಿಯನದ ನೀಲಕಂಠದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ನಮಿತಾ, ಬಳಿಕ ದರ್ಶನ್ ಜೊತೆಗೆ ಇಂದ್ರ, ಹೂ, ನಮಿತಾ ಐ ಎಲವ್ ಯೂ, ಬೆಂಕಿ ಬಿರುಗಾಳಿಯಲ್ಲಿ ಅಭಿನಯಿಸಿದ್ದಾರೆ. ಕನ್ನಡ , ತೆಲುಗು, ತಮಿಳು, ಮಲೆಯಾಳಂ ಸೇರಿದಂತೆ ಒಟ್ಟು 40 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಮಿತಾ ನಟಿಸಿದ್ದಾರೆ.
ಇದಕ್ಕೂ ಮುನ್ನ ನಟ ರಾಧಾರವಿ ಅವರು ಕೂಡಾ ಬಿಜೆಪಿಗೆ ಸೇರ್ಪಡೆಯಾದರು. ಚಲನಚಿತ್ರ ಸಮಾರಂಭವೊಂದರ ವೇಳೆ ನಯನತಾರ ಕುರಿತ ಹೇಳಿಕೆಗಳಿಂದ ಇತ್ತೀಚೆಗೆ ಪ್ರತಿಪಕ್ಷ ಡಿಎಂಕೆ ಯಿಂದ ರಾಧಾರವಿ ಅವರನ್ನು ಉಚ್ಛಾಟಿಸಲಾಗಿತ್ತು.
ರಾಧಾರವಿ ಅವರು ಎಐಎಡಿಎಂಕೆಗೆ ಗುಡ್ ಬೈ ಹೇಳಿ ಡಿಎಂಕೆ ಸೇರಿಕೊಂಡಿದ್ದರು. ಅಲ್ಲೂ ಸಹ ಅವರನ್ನು ಹೊರ ಹಾಕಿದ ನಂತರ ಇದೀಗ ಬಿಜೆಪಿ ಸೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


