ಪುನೀತ್ ಅಭಿನಯದ 'ಜೇಮ್ಸ್ 'ಚಿತ್ರಕ್ಕೆ ಟಗರು ಖ್ಯಾತಿಯ ಚರಣ್ ರಾಜ್ ಸಂಗೀತ ಸಂಯೋಜನೆ
ಚೇತನ್ ಕುಮಾರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಲಿದ್ದಾರೆ

ಬೆಂಗಳೂರು: ಚೇತನ್ ಕುಮಾರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ಈ ಮೂವರು ಒಟ್ಟಿಗೆ ಚಿತ್ರ ಮಾಡುತ್ತಿದ್ದಾರೆ. ಹೇಮಂತ್ ಎಂ ರಾವ್ ಅವರ ಗೋಧಿ ಬಣ್ಣ ಸಾಧಾರಾಣ ಮೈಕಟ್ಟು ಸಿನಿಮಾ ಮೂಲಕ ಚರಣ್ ರಾಜ್ ಮೊದಲ ಬಾರಿಗೆ ಬೆಳಕಿಗೆ ಬಂದಿದ್ದರು.
ಸೂರಿ ನಿರ್ದೇಶನದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಟಗರು ಸಿನಿಮಾದಲ್ಲಿನ ವಿಶಿಷ್ಠ ಸಂಗೀತ ಸಂಯೋಜನೆಯಿಂದ ಖ್ಯಾತಿ ಪಡೆದಿರುವ ಚರಣ್ ರಾಜ್, ಇದೀಗ ಜೇಮ್ಸ್ ಚಿತ್ರದ ಮೂಲಕ ಪುನೀತ್ ರಾಜ್ ಕುಮಾರ್ ಜೊತೆಗೆ ಕೆಲಸ ಮಾಡುತ್ತಿದ್ದಾರೆ.
ಸಾಹಿತ್ಯದಿಂದಲೂ ಗುರುತಿಸಿಕೊಂಡಿರುವ ಚೇತನ್, ಆಕ್ಷನ್ ಮಿಶ್ರಿತ ಕಮರ್ಷಿಯಲ್ ಸಿನಿಮಾ ಮಾಡುತ್ತದ್ದು, ಮೂವರ ಸಂಗಮದ ಬಗ್ಗೆ ಪುನೀತ್ ಅಭಿಮಾನಿಗಳಲ್ಲಿ ನಿರೀಕ್ಷೆ ಗರಿಗೆದರಿದೆ.
ಕಿಶೋರ್ ಪತಿಕೊಂಡಾ ನಿರ್ಮಿಸುತ್ತಿರುವ ಈ ಚಿತ್ರ ಇದೀಗ ಪ್ರಿ- ಪ್ರೊಢಕ್ಷನ್ ಹಂತದಲ್ಲಿದೆ. 2020ರಲ್ಲಿ ಚಿತ್ರೀಕರಣ ಆರಂಭವಾಗುವ ಸಾಧ್ಯತೆ ಇದೆ. ಸದ್ಯ ಆನಂದ್ ರಾಮ್ ಅವರ ಯುವರತ್ನ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಪುನೀತ್, ಜನವರಿ ಮೊದಲ ಹಂತದಿಂದ ಜೇಮ್ಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


