69 ವಸಂತಕ್ಕೆ ಕಾಲಿಟ್ಟ ತಲೈವಾ: ರಜನಿ ಪುತ್ರಿಯರಿಂದ ಹೃದಯ ಸ್ಪರ್ಶಿ ಶುಭಾಶಯ!
ಸೂಪರ್ ಸ್ಟಾರ್ ರಜನಿಕಾಂತ್ ಗೆ 69ನೇ ಹುಟ್ಟುಹಬ್ಬದ ಸಂಭ್ರಮ. ತಲೈವಾಗೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

ನವ ದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಗೆ 69ನೇ ಹುಟ್ಟುಹಬ್ಬದ ಸಂಭ್ರಮ. ತಲೈವಾಗೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.
ಈ ನಡುವೆ ರಜನಿಕಾಂತ್ ಪುತ್ರಿಯರಾದ ಐಶ್ವರ್ಯಾ ಹಾಗೂ ಸೌಂದರ್ಯ ತಮ್ಮ ಇನ್ಸಾಟಾಗ್ರಾಮ್ ನಲ್ಲಿ ಹೃದಯ ಸ್ಪರ್ಶಿ ಶುಭಾಶಯ ಕೋರಿದ್ದಾರೆ.
ರಜನಿಕಾಂತ್ ಅವರ ದೊಡ್ಡ ಮಗಳು ಐಶ್ವರ್ಯಾ, ತಮ್ಮ ತಂದೆಯ ವಿಶೇಷ ಪೋಟೋವೊಂದನ್ನು ಹಂಚಿಕೊಳ್ಳುವ ಮೂಲಕ 'ಎಂದೆಂದಿಂಗೂ ತಮ್ಮನ್ನು ಅನುಸರಿಸುವುದಾಗಿ' ತಿಳಿಸಿದ್ದಾರೆ.
ಚಿಕ್ಕ ಮಗಳು ಸೌಂದರ್ಯ, ತಮ್ಮ ತಂದೆಯ ಜೊತೆಗಿನ ಪೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ತಂದೆಗೆ ಹುಟ್ಟಹುಬ್ಬದ ಶುಭಾಶಯ ಕೋರಿದ್ದಾರೆ.
ಕಳೆದ ವರ್ಷ ರಾಜಕೀಯಕ್ಕೆ ಎಂಟ್ರಿ ನೀಡಿದ ರಜನಿಕಾಂತ್ , 2021ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಪಕ್ಷ ಸ್ಥಾಪಿಸುವ ಸಾಧ್ಯತೆ ಇದೆ. ಪೆಟ್ಟಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ರಜನಿ ಅವರ ಮುಂದಿನ ಚಿತ್ರ ದರ್ಬಾರ್ ಜನವರಿ 15, 2020ಕ್ಕೆ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ತೆರೆ ಮೇಲೆ ಅಪ್ಪಳಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


