‘ಸರ್ಕಾರಿ ಪ್ರಾಥಮಿಕ ಶಾಲೆ’ಗೆ ಸ್ವರ್ಣ ಕಮಲ!
ಕನ್ನಡ ಚಲನಚಿತ್ರರಂಗದ ಖ್ಯಾತಿ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಜ್ವಲಿಸುತ್ತಿದ್ದು, ಖ್ಯಾತ ನಿರ್ಮಾಪಕ, ನಿರ್ದೇಶಕ ರಿಷಬ್ ಶೆಟ್ಟಿಯವರ ‘ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರಕ್ಕೆ ಸ್ವರ್ಣಕಮಲ ಪ್ರಶಸ್ತಿ ಲಭಿಸಿದೆ

ಬೆಂಗಳೂರು/ನವದೆಹಲಿ: ಕನ್ನಡ ಚಲನಚಿತ್ರರಂಗದ ಖ್ಯಾತಿ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಜ್ವಲಿಸುತ್ತಿದ್ದು, ಖ್ಯಾತ ನಿರ್ಮಾಪಕ, ನಿರ್ದೇಶಕ ರಿಷಬ್ ಶೆಟ್ಟಿಯವರ ‘ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರಕ್ಕೆ ಸ್ವರ್ಣಕಮಲ ಪ್ರಶಸ್ತಿ ಲಭಿಸಿದೆ.
ದೆಹಲಿಯಲ್ಲಿಂದು ನಡೆದ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ರಿಷಬ್ ಶೆಟ್ಟಿಯವರಿಗೆ ‘ಸ್ವರ್ಣ ಕಮಲ’ ನೀಡಿ ಗೌರವಿಸಿದರು
ಕಳೆದ ವರ್ಷ ಬಿಡುಗಡೆಯಾಗಿದ್ದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸೂಪರ್ ಹಿಟ್ ಆಗಿತ್ತು ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ಸಕಾರಾತ್ಮಕ ಸಂದೇಶ ಸಾರುವ ಚಿತ್ರಕ್ಕೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು
ಸೂಪರ್ ಕಣೋ. . .
‘ಸ್ವರ್ಣ ಕಮಲ’ ಮುಡಿಗೇರಿಸಿದ ರಿಷಬ್ ಶೆಟ್ಟಿಯವರಿಗೆ ಸ್ಯಾಂಡಲ್ವುಡ್ ತಾರೆಯರ ಅಭಿನಂದನೆಯ ಮಹಾಪೂರವೇ ಹರಿದುಬಂದಿದೆ ಪ್ರೀತಿಯ ಗೆಳೆಯ ರಕ್ಷಿತ್ ಶೆಟ್ಟಿ, “ಸೂಪರ್ ಕಣೋ. . .ನಿನ್ನ ಸಾಧನೆ ಅತ್ಯಂತ ಶ್ರೇಷ್ಠವಾದದ್ದು. ಇಡೀ ಟೀಮ್ಗೆ ನಿನ್ನ ಬಗ್ಗೆ ಹೆಮ್ಮೆ ಇದೆ ಮಗಾ. . . ನಿನಗೆ ಇನ್ನಷ್ಟು ಪ್ರಶಸ್ತಿಗಳು ಸಿಗಲಿ" ಎಂದು ಟ್ವಿಟರ್ ಮೂಲಕ ಹಾರೈಸಿದ್ದಾರೆ
‘”ಪ್ರಶಸ್ತಿ ಸ್ವೀಕರಿಸಿರುವ ಬಗ್ಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ” ಎಂದು ಸ್ವತಃ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದು, ಫೋಟೋಗಳನ್ನು ಶೇರ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


