ಜ.5ಕ್ಕೆ 'ಸಲಗ' ಆಡಿಯೋ ಬಿಡುಗಡೆ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭಾಗಿ
ದುನಿಯಾ ವಿಜಯ್ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಜೊತೆಗೆ ನಾಯಕರಾಗಿಯೂ ನಟಿಸುತ್ತಿರುವ ಸಲಹ ಚಿತ್ರದ ಆಡಿಯೋ ಜನವರಿ 6 ರಂದು ಬಿಡುಗಡೆಯಾಗಲಿದ್ದು, ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ದುನಿಯಾ ವಿಜಯ್ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಜೊತೆಗೆ ನಾಯಕರಾಗಿಯೂ ನಟಿಸುತ್ತಿರುವ ಸಲಹ ಚಿತ್ರದ ಆಡಿಯೋ ಜನವರಿ 6 ರಂದು ಬಿಡುಗಡೆಯಾಗಲಿದ್ದು, ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಲಗ ಚಿತ್ರದ ಚಿತ್ರೀಕರಣ ಉತ್ತಮವಾಗಿ ಸಾಗುತ್ತಿದ್ದು, ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಚಿತ್ರತಂಡ ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ನಡೆಸಿತ್ತು. ಇದೀಗ ಚಿತ್ರದ ಚಿತ್ರೀಕರಣ ಕಡೆಯ ಹಂತದಲ್ಲಿದ್ದು, ಚಿತ್ರ ತಂಡ ಸಂತಸ ವ್ಯಕ್ತಪಡಿಸಿದೆ.
ಸಲಗ ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾವಾಗಿದ್ದು, ಚಿತ್ರದಲ್ಲಿ ದುನಿಯಾ ವಿಜಯ್, ಡಾಲಿ ಧನಂಜಯ್, ಸಂಜನಾ ಆನಂದ್, ಕಾಕ್ರೋಚ್ ಖ್ಯಾತಿಯ ಸುಧೀ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆಯ ಈ ಚಿತ್ರವನ್ನು ವೀನಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಟಗರು ನಿರ್ಮಾಪಕ ಕೆ.ಪಿ.ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


