ಸಿನಿಮಾ ಸುದ್ದಿ

ಬಾಲಿವುಡ್ ಬಿಗ್ ಬಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 'ದಾದಾ ಸಾಹೇಬ್ ಪಾಲ್ಕೆ' ಪ್ರಶಸ್ತಿ ಪ್ರದಾನ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 50ನೇ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.

ಬಾಲಿವುಡ್ ಬಿಗ್ ಬಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 'ದಾದಾ ಸಾಹೇಬ್ ಪಾಲ್ಕೆ' ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಅವರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ಅಮಿತಾಬ್ ಬಚ್ಚನ್
Published On :

ನವದೆಹಲಿ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 50ನೇ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ  ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ನಡೆದ  ಸಮಾರಂಭದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು.  ಅಮಿತಾಬ್ ಬಚ್ಚನ್ ಅವರ ಪತ್ನಿ ಜಯ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ಮತ್ತಿತರರು ಈ ಸಂಭ್ರಮಕ್ಕೆ ಕ್ಷಣಕ್ಕೆ ಸಾಕ್ಷಿಯಾದರು.

ಅನಾರೋಗ್ಯ ಸಮಸ್ಯೆಯಿಂದಾಗಿ ಈ  ಬಾರಿಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಮಿತಾಬ್ ಬಚ್ಚನ್ ಪಾಲ್ಗೊಂಡಿರಲಿಲ್ಲ. ಹಾಗಾಗೀ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು

ಭಾರತೀಯ ಚಿತ್ರರಂಗದಲ್ಲಿ ಈ ಮಟ್ಟಕ್ಕೆ ತಮ್ಮನ್ನು ಬೆಳೆಸಿದ ಜನರ ಪ್ರೀತಿ ಹಾಗೂ ಅವರ ಬೆಂಬಲಕ್ಕೆ ಈ ಪ್ರಶಸ್ತಿಯನ್ನು ಆರ್ಪಿಸುವುದಾಗಿ ಅಮಿತಾಬ್ ಬಚ್ಚನ್ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.