ಮೂರೇ ಮೂರು ದಿನಕ್ಕೆ 'ನಾರಾಯಣನ' ಕಲೆಕ್ಷನ್ ಎಷ್ಟು ಗೊತ್ತೆ?
ವರ್ಷದ ಕೊನೆಯಲ್ಲಿ ಬಿಡಗಡೆಯಾದ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಮೂರು ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ

ವರ್ಷದ ಕೊನೆಯಲ್ಲಿ ಬಿಡಗಡೆಯಾದ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಮೂರು ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ.
ರಾಜ್ಯದ 32 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ 'ಅವನೇ ಶ್ರೀಮನ್ನಾರಾಯಣ' ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ.
ತುಮಕೂರು, ಮೈಸೂರು, ದಾವಣಗೆರೆ, ಬೆಳಗಾವಿ, ಮಂಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಚಿತ್ರದುರ್ಗಗಲ್ಲಿಯೂ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಅವನೇ ಶ್ರೀಮನ್ನಾರಾಯಣ ಸಿನಿಮಾ ರಿಲೀಸ್ ಆಗಿ ಮೂರು ದಿನ ಕಳೆದಿದ್ದು, ಸಿನಿಮಾ 24 ಕೋಟಿ ರೂ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. 100 ಕೋಟಿ ರು ಕಲೆಕ್ಷನ್ ಮಾಡುವ ಗುರಿ ಹೊಂದಿರುವುದಾಗಿ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.
ಈ ಸಿನಿಮಾಗಾಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿದ್ದೇವೆ, ಸಿನಿಮಾದಲ್ಲಿ ಉತ್ತಮ ಕಥೆಯಿದೆ. ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ. ಸದ್ಯಕ್ಕೆ ಕನ್ನಡದಲ್ಲಿ ಅವನೇ ಶ್ರೀಮನ್ನಾರಾಯಣ ರಿಲೀಸ್ ಆಗಿದ್ದು, ಜನವರಿ 3ರಂದು ತಮಿಳು ಮತ್ತು ಮಲಯಾಳಂ ನಲ್ಲಿ ಹಾಗೂ ಜನವರಿ 16 ರಂದು ಹಿಂದಿಯಲ್ಲಿ ರಿಲೀಸ್ ಆಗಲಿದೆ, ತಮಿಳು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದು, ಕಥೆ ಮತ್ತು ಪಾತ್ರದ ಬಗ್ಗೆ ಹಾಡಿ ಹೊಗಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


