ಸಿನಿಮಾ ಸುದ್ದಿ

ರವಿ ಬೋಪಣ್ಣ ಸೆಟ್ ಗೆ ಲೆಟೆಸ್ಟ್ ಎಂಟ್ರಿ ರಚಿತಾ ರಾಮ್!

ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ರವಿ ಬೋಪಣ್ಣ ಚಿತ್ರದ ಚಿತ್ರೀಕರಣ ಅದ್ಧೂರಿಯಾಗಿ ನಡೆಯುತ್ತಿದೆ. ಇನ್ನು ಲೆಟೆಸ್ಟ್ ಅಪ್ಡೋಟ್ ಅಂದರೆ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ರವಿ ಬೋಪಣ್ಣ ಸೆಟ್ ಗೆ ಲೆಟೆಸ್ಟ್ ಎಂಟ್ರಿ ರಚಿತಾ ರಾಮ್!
ರವಿಚಂದ್ರನ್-ರಚಿತಾರಾಮ್
Published On :

ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ರವಿ ಬೋಪಣ್ಣ ಚಿತ್ರದ ಚಿತ್ರೀಕರಣ ಅದ್ಧೂರಿಯಾಗಿ ನಡೆಯುತ್ತಿದೆ. ಇನ್ನು ಲೆಟೆಸ್ಟ್ ಅಪ್ಡೋಟ್ ಅಂದರೆ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. 

ರಚಿತಾ ರಾಮ್ ಪ್ರವೇಶದಿಂದಾಗಿ ರವಿ ಬೋಪಣ್ಣ ಚಿತ್ರದ ಬಗ್ಗೆ ಇನ್ನಷ್ಟು ಕ್ರೇಜ್ ಹುಟ್ಟಿಕೊಂಡಿದೆ. ಚಿತ್ರದಲ್ಲಿ ರವಿಚಂದ್ರನ್ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಕಾವ್ಯಾ ಶೆಟ್ಟಿ ನಾಯಕಿಯಾಗಿ ಅಭಿನಯಿಸುತ್ತಿದ್ದು ಸಂಚಿತಾ ಪಡುಕೋಣೆ ಸಹ ನಟಿಸುತ್ತಿದ್ದಾರೆ. 

ರವಿಚಂದ್ರನ್ ಅವರು ನಿವೃತ್ತ ಸೈಬರ್ ಕ್ರೈಂ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನು ಕಿಚ್ಚ ಸುದೀಪ್ ಸಹ ವಿಶೇಷ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಅಜಿತ್ ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.