ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಬಹುಭಾಷಾ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ, ಹೇಳಿದ್ದೇನು?
ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ಬಹುಭಾಷಾ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

Published On :
ಹೈದರಾಬಾದ್: ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ಬಹುಭಾಷಾ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಟಾಲಿವುಡ್ ಸಿನಿಮಾ ಸಂಬಂಧಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಎಸ್‌ಪಿಬಿ ಅವರು ಈಗಿನ ನಟಿಯರ ವಸ್ತ್ರಧಾರಣೆ ಬಗ್ಗೆ ಕಮೆಂಟ್ ಮಾಡಿದ್ದಾರೆ ಎನ್ನಲಾಗಿದೆ.
ಈಗಿನ ಸಿನಿಮಾ ನಟಿಯರಿಗೆ ಕಾರ್ಯಕ್ರಮಗಳಲ್ಲಿ ಹೇಗಿರುವ ಬಟ್ಟೆ ಹಾಕಿಕೊಳ್ಳಬೇಕೆಂದೇ ಗೊತ್ತಿಲ್ಲ ಎಂದು ಎಸ್‌ಪಿಬಿ ಕಿಡಿಕಾರಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.
ಈ ನಟಿಯರು ಕನಿಷ್ಠ ವಸ್ತ್ರ ಹಾಕಿಕೊಂಡು ಬಂದರೆ ಮಾತ್ರ ನಿರ್ದೇಶಕರು ತಮಗೆ ಹೀರೋಯಿನ್ ಛಾನ್ಸ್ ಕೊಡ್ತಾರೆ ಎಂದುಕೊಂಡಿದ್ದಾರೆ. ಆದರೆ ಇವರಿಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೇಗೆ ಬರಬೇಕೆಂದೇ ಗೊತ್ತಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


