ಅಪ್ಪು ನಟನೆಯ ಯುವರತ್ನದಲ್ಲಿ ಧನಂಜಯ್ ವಿಲನ್!
ಡಾಲಿ ಧನಂಜಯ್ ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ವಿಲನ್ ಆಗಿದ್ದಾರೆ, ಟಗರು ಮೂಲಕ ಪ್ರಸಿದ್ಧಿ ಪಡೆದ ಡಾಲಿ ಹೀರೋ ಮತ್ತು ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ...

Published On :
ಡಾಲಿ ಧನಂಜಯ್ ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ವಿಲನ್ ಆಗಿದ್ದಾರೆ, ಟಗರು ಮೂಲಕ ಪ್ರಸಿದ್ಧಿ ಪಡೆದ ಡಾಲಿ ಹೀರೋ ಮತ್ತು ವಿಲನ್ ಪಾತ್ರ ನಿರ್ವಹಿಸುತ್ತಿದ್ದಾರೆ,
ದರ್ಶನ್ ನಟನೆಯ ಯಜಮಾನ ಸಿನಿಮಾದಲ್ಲಿ ಮಿಠಾಯಿ ಸೂರಿ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನೂ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದಲ್ಲಿ ಧನಂಜಯ್ ವಿಲನ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ,
ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ಯುವರತ್ನ ಸಿನಿಮಾವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದಾರೆ.ಫೆಬ್ರವರಿ 14 ರಿಂದ ಮಂಗಳೂರಿನಲ್ಲಿ ಶೂಟಿಂಗ್ ಆರಂಭವಾಗಲಿದೆ,ಇದರ ನಡುವೆ ಚಿತ್ರತಂಡ ಕಲಾವಿದರ ಪಟ್ಟಿ ಫೈನಲ್ ಆಗಿದೆ. ವಿಲನ್ ಆಗಿ ಧನಂಜಯ್ ಆಯ್ಕೆಯಾಗಿದ್ದು,ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ.
ಇನ್ನೂ ಧ್ರುವಸರ್ಜಾ ನಟನೆಯ ಪೊಗರು ಸಿನಿಮಾದಲ್ಲಿಯೂ ಜಗಪತಿ ಬಾಬು ಮಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ, ನಂದಕಿಶೋಪ್ ನಿರ್ದೇಶನದ ಸಿನಿಮಾ ಸದ್ಯದಲ್ಲೇ ಹೈದರಾಬಾದ್ ನಲ್ಲಿ ಶೂಟಿಂಗ್ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


