ಪುಲ್ವಾಮಾ ಉಗ್ರ ದಾಳಿ: ಪ್ರಿಯಾಂಕಾ ಚೋಪ್ರಾ ಮೇಲೆ ಐಜಿಪಿ ರೂಪಾ ಗರಂ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಯ ಬಗ್ಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮಾಡಿದ್ದ ಟ್ವೀಟ್ ಗೆ ಐಜಿಪಿ ಡಿ. ರೂಪಾ ಗರಂ ಆಗಿ ಟ್ವೀಟ್...

Published On :
ಬೆಂಗಳೂರು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಯ ಬಗ್ಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮಾಡಿದ್ದ ಟ್ವೀಟ್ ಗೆ ಐಜಿಪಿ ಡಿ. ರೂಪಾ ಗರಂ ಆಗಿ ಟ್ವೀಟ್ ಮಾಡಿದ್ದು ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಿಯಾಂಕಾ ಚೋಪ್ರಾ ತಮ್ಮ ಟ್ವೀಟರ್ ನಲ್ಲಿ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ನಿಜಕ್ಕೂ ಶಾಕ್ ಆಗಿದೆ. ದ್ವೇಷಿಸುವುದು ಉತ್ತರವಲ್ಲ. ಹುತಾತ್ಮ ಯೋಧರ ಕುಟುಂಬ ಹಾಗೂ ಗಾಯಾಳು ಯೋಧರಿಗೆ ಶಕ್ತಿ ನೀಡಲಿ ಎಂದು ಟ್ವೀಟಿಸಿದ್ದರು. ದ್ವೇಷಿಸುವುದು ಉತ್ತರವಲ್ಲ ಎಂಬ ಪ್ರತಿಕ್ರಿಯೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ ಐಜಿಪಿ ಡಿ. ರೂಪಾ ಅವರು ಯೋಧರ ಮೇಲಿನ ದಾಳಿ ಕೇವಲ ಪ್ರೀತಿ-ದ್ವೇಷದ ಸಿನಿಮಾ ಕಥೆಯಂತಲ್ಲ. ಅದೊಂದು ದೇಶದ ಮೇಲಿನ ದಾಳಿ. ಒಂದು ದೇಶದ ಶಾಂತಿಯುತ ಅಸ್ತಿತ್ವದ ಮೇಲೆ ಅಕ್ರಮ ಶಕ್ತಿಗಳು ನಡೆಸುವ ದಾಳಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನು ಸಾವಿರಾರು ಜನರು ಶೇರ್ ಮಾಡಿ, ರೂಪಾ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕpriyanka chopraಪ್ರಿಯಾಂಕಾ ಚೋಪ್ರಾಟ್ರೋಲ್trollD Roopaಡಿ ರೂಪಾPulwama attackಪುಲ್ವಾಮಾ ಉಗ್ರ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


